ಮಹಿಳೆ ರಕ್ಷಣೆಗೆ ರಾಜ್ಯ ಸರ್ಕಾರ ವಿಫಲ
ಕೊಪ್ಪಳದಲ್ಲಿ ಬಿಜೆಪಿಯಿಂದ ಪ್ರತಿಭಟನೆ
ಕರುನಾಡ ಬೆಳಗು ಸುದ್ದಿ
ಕೊಪ್ಪಳ,೧೬- ರಾಜ್ಯದ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಮಹಿಳೆ ಬೆತ್ತಲೆ ಪ್ರಕರಣ ಹಾಗೂ ಬ್ರೂಣ ಹತ್ಯೆ ನಡೆಸುತ್ತಿರುವ ಪ್ರಕರಣಗಳು ನಡೆಯುತ್ತಿರುವುದನ್ನು ಖಂಡಿಸಿ ನಗರದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿತು.
ಶನಿವಾರ ಕೊಪ್ಪಳ ನಗರದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಪ್ರತಿಭಟನೆ ಮಾಡಿ ರಾಜ್ಯ ಸರ್ಕಾರ ವಿಫಲ ವಾಗಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಬೆಳಗಾವಿಯಲ್ಲಿ ಮಹಿಳೆಯನ್ನು ಬೆತ್ತಲೆ ಗೊಳಿಸಿದ, ಅಮಾನವೀಯ ಘಟನೆಯು ನಡೆದಿದ್ದು, ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಲಾಗಿದೆ. ಆದರೆ ಆರೋಪಿಗಳನ್ನು ಬಂಧಿಸಿ, ಕಠಿಣ ಶಿಕ್ಷಗೆ ಒಳಪಡಿಸಬೇಕು. ಬೆಳಗಾವಿಯ ಮಹಿಳೆಯನ್ನು ಬೆತ್ತಲೆ ಗೊಳಿಸಿದ ಪ್ರಕರಣವನ್ನು ಸರಿಯಾದ ರೀತಿಯಲ್ಲಿ ಸರ್ಕಾರ ತನಿಖೆ ನಡೆಸಬೇಕು. ಮಹಿಳೆಯರು ಮತ್ತು ಮಕ್ಕಳಿಗೆ ರಕ್ಷಣೆ ನೀಡುವಲ್ಲಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಪ್ರಕರಣವನ್ನು ಬೇಧಿಸಿ, ಆರೋಪಿಗಳಿಗೆ ಶೀಘ್ರ ಶಿಕ್ಷೆ ವಿಧಿಸಬೇಕು. ಮಹಿಳೆಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.
ಕರ್ನಾಟಕ ರಾಜ್ಯದಲ್ಲಿ ಬ್ರೂಣ ಹತ್ಯೆ ನಡೆಸುತ್ತಿರುವ ಪ್ರಕರಣಗಳು ನಡೆಯುತ್ತಿವೆ. ಹೆಣ್ಣು ಶಿಶುಗಳಿಗೆ ರಕ್ಷಣೆ ಇಲ್ಲದಂತಾಗಿದೆ. ಹೆಣ್ಣು ಶಿಶುಗಳನ್ನು ಜನಿಸುವ ಮುನ್ನವೇ ಕೊಲ್ಲಲಾಗುತ್ತಿದ್ದು, ಸರ್ಕಾರ ಬ್ರೂಣ ಹತ್ಯಗಳನ್ನು ತಡೆಯಲಾಗುತ್ತಿಲ್ಲ. ದಿನೇ ದಿನೇ ಬ್ರೂಣ ಹತ್ಯೆ ಪ್ರಕರಣಗಳು ಹೆಚ್ಚುತ್ತಲೇ ಇವೆ. ಬ್ರೂಣ ಹತ್ಯೆಯಂತಹ ಅಮಾನವೀಯ ಕೃತ್ಯ ಮಾಡುರುವುದು ಮಾನವ ಸಮಾಜವೇ ತಲೆ ತಗ್ಗಿಸುವಂತೆ ಮಾಡಿದೆ. ಇದು ಖಂಡನೀಯವಾಗಿದೆ.
ಕಠಣ ಶಿಕ್ಷೆ ನೀಡಿ: ಬ್ರೂಣ ಹತ್ಯೆ ಮಾಡುವ ಆಸ್ಪತ್ರೆಗಳ ಸಿಬ್ಬಂದಿಗಳಿಗೆ ಕಠಿಣ ಶಿಕ್ಷೆಗಳನ್ನು ವಿಧಿಸುವ ಕೆಲಸ ಸರ್ಕಾರ ಮಾಡುತ್ತಿಲ್ಲ. ಇದರಿಂದಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಈ ಮೂಲಕ ಸರ್ಕಾರ ಮತ್ತು ಗೃಹ ಇಲಾಖೆಯು ಕಾನೂನು ಪಾಲನೆ ಮಾಡುತ್ತಿಲ್ಲ. ಹಾಗಾಗಿ ಬ್ರೂಣ ಹತ್ಯೆ ಮಾಡುವ ಆಸ್ಪತ್ರೆಗಳ ವೈದ್ಯರು ಮತ್ತು ಸಿಬ್ಬಂದಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಈ ನಿಟ್ಟಿನಲ್ಲಿ ಬ್ರೂಣ ಹತ್ಯೆ ಆಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಆದಾಗ್ಯೂ ಬ್ರೂಣ ಹತ್ಯೆ ನಡೆದಲ್ಲಿ, ಸಂಬಂಧಿಸಿದ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಕೊಪ್ಪಳದ ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ್, ಮಾಜಿ ಶಾಸಕ ಪರಣ್ಣ ಮುನವಳ್ಳಿ, ವಿಭಾಗೀಯ ಸಹ ಪ್ರಭಾರಿ ಚಂದ್ರಶೇಖರ ಪಾಟೀಲ್ ಹಲಗೇರಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನವೀನ್ ಗುಳಗಣ್ಣನವರ, ಜಿಲ್ಲಾ ವಕ್ತಾರ ಮಹೇಶ ಅಂಗಡಿ, ಮಹಿಳಾ ಘಟಕದ ಜಿಲ್ಲಾಧ್ಯಕ್ಷ ವಾಣಿಶ್ರೀ, ಬಿಜೆಪಿ ನಾಯಕಿ ಮಂಜುಳಾ ಕರಡಿ, ನಗರ ಘಟಕದ ಅಧ್ಯಕ್ಷ ಸುನೀಲ್ ಹೆಸರೂರು, ತಾಲೂಕಾಧ್ಯಕ್ಷ ಪ್ರದೀಪ್ ಹಿಟ್ನಾಳ್, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಹಾಂತೇಶ ಪಾಟೀಲ್ ಮೈನಳ್ಳಿ, ಮಹಿಳಾ ರಾಜ್ಯ ಕಾರ್ಯದರ್ಶಿ ಶೋಭಾ ನಗರಿ, ಮುಖಂಡರಾದ ಮಹಾಲಕ್ಷ್ಮಿ ಕಂದಾರಿ, ಗಣೇಶ್ ಹೊರತಟ್ನಾಳ, ರಾಜು ಬಾಕಳೆ, ಅಪ್ಪಣ್ಣ ಪದಕಿ, ಚಂದ್ರಶೇಖರ್ ಕವಲೂರ್, ರಮೇಶ, ಗೀತಾ ಪಾಟೀಲ್, ಕೀರ್ತಿ ಪಾಟೀಲ್, ಮರ್ದಾನ ಅಲಿ, ರೋಷನ್, ಪಂಪಯ್ಯ, ರವಿಚಂದ್ರನ, ಅಂಬರೀಶ್, ಪುಟ್ಟರಾಜು, ಶರಣಯ್ಯ, ರಾಜು ಶಿವಯ್ಯ ಹಿರೇಮಠ, ಶರಣಯ್ಯ ಹಿರೇಮಠ ಸೇರಿದಂತೆ ಅನೇಕ ಕಾರ್ಯಕರ್ತರು ಇದ್ದರು.
