IMG-20240419-WA0001

 

ಕೊಪ್ಪಳದ ‌ಮೂವರು ಸೇರಿ ನಾಲ್ಕು ಜನರ‌ ಭೀಕರ ಹತ್ಯೆ

ಕರುನಾಡ ಬೆಳಗು ಸುದ್ದಿ

ಕೊಪ್ಪಳ , 19- ಪಕ್ಕದ ದದಗ ಬೆಟಗೇರಿ ನಗರಸಭೆ ಅಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ ಸೇರಿದಂತೆ ಕೊಪ್ಪಳದ ಭಾಗ್ಯನಗರದ ಮೂವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹಾಕಿರುವ ದಾರೂಣ ಘಟನೆ ಜರುಗಿದೆ.

ಗದಗ ನಗರದಲ್ಲಿ ಗುರುವಾರ ಮಧ್ಯರಾತ್ರಿ ಈ ಘಟನೆ ನಡೆದಿದೆ ಎನ್ನಲಾಗಿದೆ,
ಗದಗ ಚನ್ನಮ್ಮ ವೃತ್ತದ ಸಮೀಪ ಇರುವ ದಾಸರ ಓಣಿಯಲ್ಲಿ ಈ ಘಟನೆ ನಡೆದಿದ್ದು, ಸುನಂದಾ ಬಾಕಳೆ ಅವರ ಪುತ್ರ ಕಾರ್ತಿಕ ಬಾಕಳೆ (27), ಕೊಪ್ಪಳದ ಭಾಗ್ಯನಗರದ ಪರುಶುರಾಮ (55), ಲಕ್ಷ್ಮಿ (45) ಮತ್ತು ಆಕಾಂಕ್ಷ (17) ಕೊಲೆಯಾಗಿದ್ದು ಇದರಲ್ಲಿ ಕೊಪ್ಪಳದ ಭಾಗ್ಯನಗರದ ಮೂವರು ಕೊಲೆಯಾಗಿದ್ದಾರೆ .

ಸುನಂದ ಬಾಕಳೆ ಪುತ್ರ ಕಾರ್ತಿಕ ಬಾಕಳೆ ಮದುವೆ ನಿಶ್ಚಯ ಕಾರ್ಯಕ್ರಮದ ನಿಮಿತ್ತ ಸಂಬಂಧಿಗಳು ಏ. 17ರಂದು ಮನೆಗೆ ಬಂದಿದ್ದರು. ಏ.18ರಂದು ರಾತ್ರಿ ಮನೆಯ ಮೊದಲ ಮಹಡಿಯ ಕೋಣೆಯಲ್ಲಿ ಮಲಗಿದ್ದಾಗ ಹತ್ಯೆ ಮಾಡಲಾಗಿದೆ. ತೀವ್ರ ರಕ್ತಸ್ರಾವದಿಂದ ನಾಲ್ಕೂ ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಪರಾರಿ ; ಬಾಗಿಲು ಸದ್ದು ಕೇಳಿ ಅನುಮಾನಗೊಂಡು ಪೊಲೀಸರಿಗೆ ಫೋನ್ ಮಾಡಿದ ಕುಟುಂಬಸ್ಥರು‌. ಪೊಲೀಸರಿಗೆ ಫೋನ್ ಮಾಡ್ತಾಯಿದ್ದಂತೆ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ.
ಪರಿಶೀಲನೆ ; ಶ್ವಾನದಳ, ಫಾರಿನ್ ಸಿಕ್ ತಂಡಗಳಿಂದ ಇಂಚಿಂಚು ಪರಿಶೀಲನೆ ಮಾಡಿದ್ದು ಸ್ಥಳಕ್ಕೆ ಗದಗ ಎಸ್ಪಿ ಬಿ ಎಸ್ ನೇಮಗೌಡ, ಹೆಚ್ಚುವರಿ ಎಸ್ಪಿ ಎಂ ಬಿ ಸಂಕದ, ಡಿವೈಎಸ್ಪಿ, ಸಿಪಿಐ ಸೇರಿ ಹಲವು ಅಧಿಕಾರಿಗಳು ಭೇಟಿ ಪರಿಶೀಲನೆ ಮಾಡಿ ತನಿಖೆ ನಡೆಸುತ್ತಿದ್ದಾರೆ.

 

Leave a Reply

Your email address will not be published. Required fields are marked *

error: Content is protected !!