
ಕೊಪ್ಪಳ ಆರ್‌ಸೆಟಿ : ವಿವಿಧ ತರಬೇತಿಗಳಿಗೆ ಅರ್ಜಿ ಆಹ್ವಾನ
ಕರುನಾಡ ಬೆಳಗು ಸುದ್ದಿ
ಕೊಪ್ಪಳ,28- ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ಕೊಪ್ಪಳ ವತಿಯಿಂದ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗೆ ಬ್ಯೂಟಿ ಪಾರ್ಲರ್ ಮತ್ತು ಮಹಿಳಾ ಹೊಲಿಗೆ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
30 ದಿನಗಳ ಬ್ಯೂಟಿ ಪಾರ್ಲರ್ ಮತ್ತು ಮಹಿಳಾ ಹೊಲಿಗೆ ತರಬೇತಿಯನ್ನು ಊಟ ಮತ್ತು ವಸತಿಯೊಂದಿಗೆ ಉಚಿತವಾಗಿ ನೀಡಲಾಗುವುದು. ಕನಿಷ್ಠ ಎಂಟನೇ ತರಗತಿ ಉತ್ತೀರ್ಣರಾದ 18 ರಿಂದ 45 ವರ್ಷದೊಳಗಿನ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಜಿಲ್ಲೆಯ ಗ್ರಾಮೀಣ ಭಾಗದವರಾಗಿರಬೇಕು.
ಸ್ವಯಂ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು. ಏಪ್ರಿಲ್ 10 ರಂದು ಸಂದರ್ಶನ ನಡೆಯಲಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಏ.12 ರಿಂದ ತರಬೇತಿ ಆರಂಭಿಸಲಾಗುವುದು.
ಆಸಕ್ತರು ಆಧಾರ್ ಕಾರ್ಡ, ರೇಷನ್ ಕಾರ್ಡ್, ಮಾರ್ಕ್ಸ್ ಕಾರ್ಡ್ಗಳ ಜೆರಾಕ್ಸ್ ಪ್ರತಿಗಳು ಹಾಗೂ 03 ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ನಿರ್ದೇಶಕರು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ, ಜಿಲ್ಲಾ ಕೈಗಾರಿಕಾ ಕೇಂದ್ರ ಆವರಣ, ಅಶೋಕ ಸರ್ಕಲ್ ಹತ್ತಿರ, ಕೊಪ್ಪಳ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08539-231038, 9483618178, 9481085217, 7259073827, 6364173983 ಗೆ ಸಂಪರ್ಕಿಸಬಹುದು ಎಂದು ಎಸ್‌ಬಿಐ ಆರ್‌ಸೆಟಿ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.