
ಮನೆಕದ್ದ ಕಳನನ್ನು ವಶಕ್ಕೆ ಪಡೆದ ಪೊಲೀಸರು
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 28- ನಗರದಲ್ಲಿ 10 ದಿನದ ಹಿಂದೆ ಮನೆಯೊಂದರಲ್ಲಿ ಚಿನ್ನ ಕದ್ದಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ.
ಜಿಲ್ಲೆಯ ಗಂಗಾವತಿ ನಿವಾಸಿ ಪ್ರತಾಪ್ ಮುಚಿಗೇರ ಬಂಧನವಾದಾತ. ಈತನಿಂದ 4 ಪ್ರಕರಣಗಳಿಗೆ ಸಂಬಂಧಿಸಿದಂತೆ 80 ಗ್ರಾಂ ಚಿನ್ನ ಹಾಗೂ 10,500ರೂ. ನಗದು ವಶಕ್ಕೆ ಪಡೆದಿದ್ದು, ಒಟ್ಟು 4.58ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಕೊಪ್ಪಳದಲ್ಲಿ ಕಳೆದ 10 ದಿನದ ಹಿಂದೆ ಕೊಪ್ಪಳದ ಸಿದ್ದೇಶ್ವರ ನಗರದಲ್ಲಿ ಮನೆ ಕಳ್ಳತನವಾಗಿತ್ತು. ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ಆರೋಪಿ ಮನೆಯಲ್ಲಿದ್ದಾಗ ದಾಳಿ ಮಾಡಿದ ಪೊಲೀಸರು ವಿಚಾರಣೆ ನಡೆಸಿದಾಗ ಕದ್ದಿರುವ ವಿಷಯ ಬಾಯ್ಬಿಟ್ಟಿದ್ದಾನೆ.
ಕೊಪ್ಪಳದಲ್ಲಿ ಎರಡು ಹಾಗೂ ಮುನಿರಾಬಾದ್‌ನಲ್ಲಿ ಎರಡು ಪ್ರಕರಣ ದಾಖಲಾಗಿವೆ. ಎರಡು ಪ್ರಕರಣಗಳಲ್ಲಿ 2.50 ಲಕ್ಷ ರೂ. ಮೌಲ್ಯದ 50 ಗ್ರಾಂ ಚಿನ್ನ ಹಾಗೂ ಮತ್ತೊಂದರಲ್ಲಿ 1.50 ಲಕ್ಷ ರೂ. ಮೌಲ್ಯದ 30 ಗ್ರಾಂ ಚಿನ್ನ ಕದ್ದ ಬಗ್ಗೆ ಪ್ರಕರಣ ದಾಖಲಾಗಿವೆ. ಪ್ರಕರಣ ಭೇದಿಸಿದ ತಂಡಕ್ಕೆ ಎಸ್ಪಿ ಯಶೋದಾ ವಂಟಗೋಡಿ ಬಹುಮಾನ ನೀಡಿದ್ದಾರೆ.