
ಕೊಪ್ಪಳ ಜೆಸ್ಕಾಂ : ಇಂದು ಗ್ರಾಹಕರ ಅಹವಾಲು ಸ್ವೀಕಾರ ಸಭೆ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 17- ಜೆಸ್ಕಾಂ ಕೊಪ್ಪಳ ಉಪವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆ ಹಾಗೂ ಅಹವಾಲುಗಳನ್ನು ಸ್ವೀಕರಿಸಲು ಇಂದು ಬೆಳಿಗ್ಗೆ 11 ಗಂಟೆಗೆ ನಗರದ ಕಾರ್ಯ ಮತ್ತು ಪಾಲನಾ ವಿಭಾಗ ಕಚೇರಿ ಸಭಾಂಗಣದಲ್ಲಿ ಗ್ರಾಹಕರ ಅಹವಾಲು ಸ್ವೀಕಾರ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.
ವಿದ್ಯುತ್ ಗ್ರಾಹಕರು ಸಭೆಗೆ ಹಾಜರಾಗಿ ವಿದ್ಯುತ್‌ಗೆ ಸಂಬAಧಿಸಿದ ತಮ್ಮ ದೂರು, ಅಹವಾಲುಗಳನ್ನು ಸಲ್ಲಿಸಿ, ಪರಿಹಾರ ಕಂಡುಕೊಳ್ಳಬೇಕು ಎಂದು ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.