16eb94f1-46d2-4499-b6e1-8cea73520ba2

ಲೆಕ್ಕ ಪರಿಶೋಧನೆಗೆ ಅಗತ್ಯ ದಾಖಲಾತಿ ಸಲ್ಲಿಸಿ 

ಜಿ.ಪಂ ಮುಖ್ಯಲೆಕ್ಕಾಧಿಕಾರಿ ಅಮೀನ್‌ ಅತ್ತಾರ

ಕೊಪ್ಪಳ ತಾಲೂಕ ಪಂಚಾಯತಿಯಲ್ಲಿಅಡಹಾಕ್ ಪೂರ್ವಭಾವಿ ಸಭೆ

ಕರುನಾಡ ಬೆಳಗು ಸುದ್ದಿ

ಕೊಪ್ಪಳ :-2014-15 ನೇ ಸಾಲಿನ ಗ್ರಾಮ ಪಂಚಾಯತಿಗಳ ಬಾಕಿ ಉಳಿಸಿಕೊಂಡಿರುವ ಕಂಡಿಕೆಗಳ ತಿರುವಳಿಗಳ ಕುರಿತು ದಿನಾಂಕ :24-11-223ರಂದು ಕೊಪ್ಪಳ ತಾಲೂಕ ಪಂಚಾಯತಿಯಲ್ಲಿ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ ಜರುಗಿತು.

ಅಡಹಾಕ್ ಪೂರ್ವಭಾವಿ ಸಭೆಗೆ ಜಿಲ್ಲಾ ಪಂಚಾಯತಿಯ ಮುಖ್ಯಲೆಕ್ಕಾಧಿಕಾರಿ ಅಮೀನ್  ಅತ್ತಾರ  ಭಾಗವಹಿಸಿ ವಿವಿಧ ಗ್ರಾಮ ಪಂಚಾಯತಿಗಳಿಗೆ ನಿಯಮಾನುಸಾರ ದಾಖಲಾತಿಗಳನ್ನು ಸಲ್ಲಿಸುವಂತೆ ಹಾಗು 2014-15ನೇ ಸಾಲಿನ ಕಂಡಿಕೆಗಳನ್ನು ತಿರುವಳಿಗೊಳಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು. 2014-15ನೇ ಸಾಲಿನ ಎಲ್ಲಾ ಕಂಡಿಕೆಗಳನ್ನು ತಿರುವಳಿಗೊಳಿಸಲು ಆದ್ಯತೆ ಮೇರೆಗೆ ಕ್ರಮ ಕೈಗೊಳ್ಳುವಂತೆ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗು ಸಹಾಯಕ ಲೆಕ್ಕಾಧಿಕಾರಿಗಳಿಗೆ ಸೂಚಿಸಿದರು.
‌    ಅಡಹಾಕ್‌ ಸಭೆಯಲ್ಲಿ ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ತುರಾದಿ, ಸಹಾಯಕ ಲೆಕ್ಕಾಧಿಕಾರಿ ರವಿಕುಮಾರ, ತಾಲೂಕ ಯೋಜನಾಧಿಕಾರಿ ರಾಜೇಸಾಬ ನದಾಫ್, ಲೆಕ್ಕಶಾಖೆಯ ಕಿರಣ್, ಗ್ರಾಮ ಪಂಚಾಯತಿಗಳ ಪಿಡಿಒಗಳು ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!