2c136fae-be38-4577-97e1-318669006cc9

ಕೊಪ್ಪಳ ನಗರಸಭೆ : ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 20- 2024-25 ನೇ ಸಾಲಿನ ದೀನ್‌ದಯಾಳ ಅಂತ್ಯೋದಯ- ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದಡಿ ಕೊಪ್ಪಳ ನಗರಸಭೆ ವ್ಯಾಪ್ತಿಯಲ್ಲಿ ಬರುವ ವಿವಿಧ ವಾರ್ಡ್ ಮತ್ತು ಪ್ರದೇಶಮಟ್ಟದ ಒಕ್ಕೂಟಗಳಲ್ಲಿ ಸ್ವಯಂ ಉದ್ಯೋಗ ಪ್ರಾರಂಭಿಸಿಕೊಳ್ಳಲು ಮತ್ತು ಗುಂಪು ಚಟುವಟಿಕೆ ನಿರ್ವಹಿಸುವವರೆಗೆ ಸಾಲ ಸೌಲಭ್ಯಕ್ಕಾಗಿ ಹಾಗೂ ಸ್ವ-ಸಹಾಯ ಸಂಘಗಳನ್ನು ರಚಿಸುವ ಕುರಿತು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸ್ವಯಂ ಉದ್ಯೋಗಕ್ಕಾಗಿ ಸಾಲ ಸೌಲಭ್ಯ, ಸ್ವ-ಸಹಾಯ ಗುಂಪು ರಚನೆ, ಸ್ವ ಸಹಾಯ ಗುಂಪುಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಸಾಲ ಸೌಲಭ್ಯ(ಕ್ರೆಡಿಟ್ ಲಿಂಕೇಜ್), ಪ್ರದೇಶ ಮಟ್ಟದ ಒಕ್ಕೂಟಗಳ ರಚನೆಗಾಗಿ ಸಾಲ ಸೌಲಭ್ಯಗಳಿಗೆ ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದು.

18 ರಿಂದ 43 ವರ್ಷ ವಯೋಮಾನದ ಆಸಕ್ತ ಫಲಾನುಭವಿಗಳು ಅರ್ಜಿಗಳನ್ನು ಕಾರ್ಯಾಲಯದ ವಿಷಯ ನಿರ್ವಾಹಕರಿಂದ ಪಡೆದು ಭರ್ತಿ ಮಾಡಿ, ಅರ್ಜಿಯೊಂದಿಗೆ ಚಾಲ್ತಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಿದ್ಯಾರ್ಹತೆ ಪ್ರಮಾಣ ಪತ್ರಗಳು, ಬಿ.ಪಿ.ಎಲ್. ರೇಶನ್ ಕಾರ್ಡ್, ಚುನಾವಣೆ ಗುರುತಿನ ಚೀಟಿ, ಆಧಾರ್ ಕಾರ್ಡ್ಗಳನ್ನು ದ್ವಿಪ್ರತಿಯಲ್ಲಿ ಜೂನ್ 28 ರೊಳಗಾಗಿ ನಗರಸಭೆ ಕಾರ್ಯಾಲಯಕ್ಕೆ ಸಲ್ಲಿಸಬೇಕು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!