2c136fae-be38-4577-97e1-318669006cc9

ಕೊಪ್ಪಳ, ಮುನಿರಾಬಾದ್, ಯಲಬುರ್ಗಾ ವಿದ್ಯುತ್ ಗ್ರಾಹಕರ ಸಂವಾದ ಸಭೆ

ಕರುನಾಡ ಬೆಳಗು ಸುದ್ದಿ

ಕೊಪ್ಪಳ,15- ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಕೊಪ್ಪಳ ಕಾರ್ಯ ಮತ್ತು ಪಾಲನಾ ವಿಭಾಗದಿಂದ ವಿದ್ಯುತ್ ಗ್ರಾಹಕರ ಸಂವಾದ ಸಭೆ ಮಾರ್ಚ್ 16ರಂದು ಕೊಪ್ಪಳ, ಮುನಿರಾಬಾದ್ ಹಾಗೂ ಯಲಬುರ್ಗಾದಲ್ಲಿ ಏರ್ಪಡಿಸಲಾಗಿದೆ.

ವಿದ್ಯುತ್‌ಗೆ ಸಂಬಂಧಿಸಿದ ಕುಂದು ಕೊರತೆಗಳನ್ನು ಪರಿಹರಿಸುವ ಉದ್ದೇಶದಿಂದ ಗ್ರಾಹಕರ ಸಂವಾದ ಸಭೆಯನ್ನು ಹಾಗೂ ಸ್ಟ್ಯಾಂಡ‍‍‍ರ್ಡ ಆಫ್ ಪರ್ಫಾಮೇನ್ಸ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಅಧೀಕ್ಷಕ ಅಭಿಯಂತರರು(ವಿ)/ಕಾರ್ಯನಿರ್ವಾಹಕ ಅಭಿಯಂತರರು ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿರುತ್ತದೆ. ಅದರಂತೆ ಕೊಪ್ಪಳ ಜೆಸ್ಕಾಂ ವಿಭಾಗದ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಸಂವಾದ ಸಭೆಯು ಕೊಪ್ಪಳ ಜೆಸ್ಕಾಂ ವಿಭಾಗ ಕಚೇರಿ ಸಭಾಂಗಣದಲ್ಲಿ, ಮುನಿರಾಬಾದ್ ಜೆಸ್ಕಾಂ ಉಪ ವಿಭಾಗದ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಸಂವಾದ ಸಭೆಯು ಕಾರ್ಯ ಮತ್ತು ಪಾಲನಾ ಉಪ ವಿಭಾಗ ಕಚೇರಿ ಮುನಿರಾಬಾದಿನಲ್ಲಿ ಹಾಗೂ ಯಲಬುರ್ಗಾ ಉಪ ವಿಭಾಗದ ವಿದ್ಯುತ್ ಗ್ರಾಹಕರ ಸಂವಾದ ಸಭೆಯನ್ನು ಕಾರ್ಯ ಮತ್ತು ಪಾಲನಾ ಉಪ ವಿಭಾಗ ಕಚೇರಿ ಯಲಬುರ್ಗಾದಲ್ಲಿ ಮಾರ್ಚ್ 16ರ ಬೆಳಿಗ್ಗೆ 11ಕ್ಕೆ ನಡೆಯಲಿದೆ.

ಆಯಾ ಉಪವಿಭಾಗ ವ್ಯಾಪ್ತಿಯ ಎಲ್ಲಾ ವಿದ್ಯುತ್ ಗ್ರಾಹಕರು ಸಭೆಗೆ ಹಾಜರಾಗಿ, ಯಶಸ್ವಿಗೊಳಿಸಬೇಕು ಎಂದು ಗುವಿಸಕಂನಿ ಕೊಪ್ಪಳ ಕಾರ್ಯ ಮತ್ತು ಪಾಲನಾ ವಿಭಾಗ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!