
ಕೊಪ್ಪಳ : 10 ರಂದು ಬಸವ ಜಯಂತಿ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 7- ಬಸವ ಜಯಂತ್ಯೋತ್ಸವ ಸಮಿತಿ ಕೊಪ್ಪಳ ಮತ್ತು ವಿವಿಧ ಕೊಪ್ಪಳದ ಬಸವಾನುಯಾಯಿಗಳ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಮೇ 10 ಶುಕ್ರವಾರದಂದು ವಿಶ್ವಗುರು ಬಸವೇಶ್ವರ ಜಯಂತ್ಯೋತ್ಸವ ಸಮಾರಂಭವನ್ನು ಆಯೋಜಿಸಲಾಗಿದೆ.
ಅಂದು ಬೆಳಿಗ್ಗೆ 9:00 ಗಂಟೆಗೆ ನಗರದ ಬಸವೇಶ್ವರ ವೃತ್ತದಲ್ಲಿ ಷಟಸ್ಥಲ ಧ್ವಜಾರೋಹಣ ನೆರವೇರಲಿದೆ. ಸಂಜೆ 4:50 ಗಂಟೆಗೆ ಕೋಟೆ ರಸ್ತೆಯ ಮಹೇಶ್ವರ ದೇವಸ್ಥಾನದಿಂದ ಶಾರದಾ ಚಿತ್ರಮಂದಿರ ಮಾರ್ಗವಾಗಿ ಶ್ರೀ ಗವಿಮಠದ ಆವರಣದವರೆಗೆ ಶ್ರೀ ಬಸವೇಶ್ವರ ಭಾವಚಿತ್ರದ ಭವ್ಯ ಮೆರವಣಿಗೆ ಇರುತ್ತದೆ.
ಸಂಜೆ 6:00ಗಂಟೆಗೆ ಶ್ರೀ ಗವಿಮಠದ ಆವರಣದಲ್ಲಿ ಬಸವಗೋಷ್ಠಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ದಿವ್ಯ ಸಾನಿದ್ಯವನ್ನು ಪೂಜ್ಯ ಶ್ರೀ ಮ.ನಿ.ಪ್ರ.ಸ್ವ.ಜ. ಗವಿಸಿದ್ಧೇಶ್ವರ ಮಹಾಸ್ವಾಮಿಗಳು, ಸಂಸ್ಥಾನ ಶ್ರೀ ಗವಿಮಠ ಕೊಪ್ಪಳ ಇವರ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಪೂಜ್ಯ ಶ್ರೀ ಸಿದ್ಧಬಸವ ಕಬೀರ ಮಹಾಸ್ವಾಮಿಗಳು, ಶ್ರೀ ಜಗದ್ಗುರು ಮರುಳಶಂಕರದೇವರ ಗುರುಪೀಠ, ಚಿಗರಹಳ್ಳಿ, ತಾ||ಜೇವರ್ಗಿ ಇವರು ಆಗಮಿಸಲಿದ್ದಾರೆ. ಮತ್ತು ಶರಣೆ ಗಂಗಾಂಬಿಕಾ ಬಸವರಾಜ ಪಾಟೀಲ್, ಬಸವ ಚಿಂತಕರು ಭದ್ರಾವತಿ ಇವರು ಅನುಭಾವ ನೀಡಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ವಚನ ಸಂಗೀತ ಮತ್ತು ವಿವಿಧ ಕ್ಷೇತ್ರದ ಸಾಧಕರಿಗೆ ಬಸವ ಕಾರುಣ್ಯ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಎಲ್ಲಾ ಕಾರ್ಯಕ್ರಮಗಳಿಗೆ ಬಸವಾನುಯಾಯಿಗಳು, ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಬಸವ ಜಯಂತ್ಯೋತ್ಸವ ಸಮಿತಿಯ ಅಧ್ಯಕ್ಷರಾದ ಬಸವರಾಜ ಬಳ್ಳೊಳ್ಳಿಯವರು ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.