2c136fae-be38-4577-97e1-318669006cc9

ಕ್ರೀಡಾ ವಿದ್ಯಾರ್ಥಿವೇತನಕ್ಕೆ ಅರ್ಜಿ : ಅವಧಿ ವಿಸ್ತರಣೆ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 4- ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2024-25ನೇ ಸಾಲಿನಲ್ಲಿ ಪ್ರತಿಭಾವಂತ ಮಾಧ್ಯಮಿಕ, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ. 10,000 ರಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅವಧಿಯನ್ನು ಜುಲೈ 20ರ ವರೆಗೆ ವಿಸ್ತರಿಸಲಾಗಿದೆ.

ರಾಜ್ಯ ಸರ್ಕಾರದ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಧ್ಯಮಿಕ, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ (6ನೇ ತರಗತಿಯಿಂದ 10ನೇ ತರಗತಿಯವರೆಗೆ) ವಾರ್ಷಿಕ ರೂ. 10,000 ಗಳಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನವನ್ನು ನೀಡುವ ಯೋಜನೆ ಇಲಾಖೆಯಲ್ಲಿ ಜಾರಿಯಲ್ಲಿದ್ದು, ಈ ಯೋಜನೆಯನ್ವಯ 2024-25ನೇ ಸಾಲಿಗೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಹ ಕ್ರೀಡಾಪಟುಗಳಿಂದ ಅಧಿಕೃತ ಜಾಲತಾಣ http://sevasindhuservices.karnataka.gov.in ನಲ್ಲಿ ಆನ್‌ಲೈನ್ ಮೂಲಕ ಜೂನ್ 30ರ ವರೆಗೆ ಅರ್ಜಿ ಸಲ್ಲಿಸಲು ಸೂಚಿಸಲಾಗಿತ್ತು. ಆದರೆ ಈ ದಿನಾಂಕವನ್ನು ಜುಲೈ 20ರ ವರೆಗೆ ಮುಂದುವರೆಸಿ ಆದೇಶಿಸಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!