
ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ
ಗಂಗಾವತಿಯಲ್ಲಿ ಲೋಕಾಯುಕ್ತ ದಾಳಿ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 05- ಜಿಲ್ಲೆಯ ಗಂಗಾವತಿಯಲ್ಲಿರುವ ಬಳ್ಳಾರಿ ಜಿಲ್ಲೆಯ ಕಂಪ್ಲಿ ಪುರಸಭೆ ಪರಿಸರ ಅಭಿಯಂತರರ ಮನೆ ಮೇಲೆ ದಾಳಿ ಲೋಕಾಯುಕ್ತ ದಾಳಿ ನಡೆದಿದೆ.
ಮಂಗಳವಾರ ಬೆಳಂ ಬೆಳಿಗ್ಗೆ ಗಂಗಾವತಿ ನಗರದ ಶಿಕ್ಷಕರ ಕಾಲೋನಿಯಲ್ಲಿರುವ ಪರಿಸರ ಅಭಿಯಂತರ ಶರಣಪ್ಪ ಮನೆ ಮೇಲೆ ದಾಳಿ ಮಾಡಲಾಗಿದೆ.
ಅಕ್ರಮ ಆಸ್ತಿ ಸಂಪಾದನೆ ಆರೋಪದ ಹಿನ್ನಲೆಯಲ್ಲಿ ಕೊಪ್ಪಳ ಲೋಕಾಯುಕ್ತ ಡಿವೈಎಸ್ಪಿ ಸಲಿಂ ಪಾಷ ನೇತೃತ್ವದಲ್ಲಿ ದಾಳಿ ನಡೆದಿದೆ
ದಾಳಿ ಸಂದರ್ಭದಲ್ಲಿ ಮನೆಯಲ್ಲಿ ಇದ್ದ ಅಭಿಯಂತರ ಶರಣಪ್ಪ ಇಗು ಸಹ ಮನೆಯಲ್ಲಿಯೇ ಇದ್ದಾರೆ.
ಲೋಕಾಯುಕ್ತರು ದಾಖಲೆಗಳನ್ನು ಪರಿಶೀಲಿಸುತ್ತಿದ್ದು ಅಕ್ರಮ ಆಸ್ತಿ ತನೆಖೆ ನಡೆದಿದೆ.