ಗಂಗಾವತಿ ನಗರಸಭೆ : ಟುಲಿಪ್ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 20- 2023-24 ಹಾಗೂ 2024-25 ನೇ ಸಾಲಿನ ದೀನದಯಾಳ್ ಅಂತ್ಯೋದಯ ಯೋಜನೆ- ರಾಷ್ಟಿçÃಯ ನಗರ ಜೀವನೋಪಾಯ ಅಭಿಯಾನದಡಿ ಗಂಗಾವತಿ ನಗರಸಭೆ ವ್ಯಾಪ್ತಿಯಲ್ಲಿ ಬರುವ ಪದವೀಧರರಿಗೆ ನಗರ ಕಲಿಕಾ ಮತ್ತು ಪ್ರಾಯೋಗಿಕಾ ತರಬೇತಿ (TULIP;The Urban Lerning Internship programe) ಕಾರ್ಯಕ್ರಮ ಆಯೋಜಿಸಲಾಗಿದ್ದು, ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಕಾರ್ಯಾಲಯದ ಡೇ-ನಲ್ಮ್ ವಿಭಾಗದಲ್ಲಿ ಪಡೆದು ಭರ್ತಿ ಮಾಡಿ, ಅರ್ಜಿಯೊಂದಿಗೆ ವಾಸಸ್ಥಳ ಪ್ರಮಾಣ ಪತ್ರ(ಸ್ಥಳೀಯರಿಗೆ ಆದ್ಯತೆ), ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪದವಿ ಪೂರ್ಣಗೊಂಡ ಬಗ್ಗೆ ವಿದ್ಯಾರ್ಹತೆ ಪ್ರಮಾಣ ಪತ್ರಗಳು(ಕಂಪ್ಯೂಟರ್ ಮತ್ತು ತಾಂತ್ರಿಕ ಕೌಶಲ್ಯ ಉಳ್ಳವರಿಗೆ ಆದ್ಯತೆ), ರೇಶನ್ ಕಾರ್ಡ್, ಚುನಾವಣೆ ಗುರುತಿನ ಚೀಟಿ, ಆಧಾರ್ ಕಾರ್ಡ್ (ಕಡ್ಡಾಯವಾಗಿ ಮೊಬೈಲ್ ನಂಬರ್ ಬ್ಯಾಂಕ್ ಲಿಂಕನ್ನು ಹೊಂದಿರತಕ್ಕದ್ದು), ಬ್ಯಾಂಕ್ ಪಾಸ್ ಬುಕ್ ಮತ್ತು ಪಾನ್ ಕಾರ್ಡಗಳ ಪ್ರತಿಗಳನ್ನು ಸ್ವಯಂ ದೃಢೀಕರಿಸಿ ಪಾಸ್ಪೋಟ್ ಅಳತೆಯ 2 ಭಾವಚಿತ್ರಗಳೊಂದಿಗೆ ದ್ವಿಪ್ರತಿಯಲ್ಲಿ ಜುಲೈ 15 ರ ಸಂಜೆ 05.30 ಗಂಟೆಯೊಳಗೆ ನಗರಸಭೆ ಕಾರ್ಯಾಲಯಕ್ಕೆ ಸಲ್ಲಿಸಬೇಕು. ತಡವಾಗಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಕಾರ್ಯಾಲಯದ ವೇಳೆಯಲ್ಲಿ ಡೇ-ನಲ್ಮ್ ವಿಭಾಗದ ಸಮುದಾಯ ಸಂಘಟನಾಧಿಕಾರಿ ವಿಜಯಲಕ್ಷೀ: 9886391338 ಹಾಗೂ ಕಾಂತಮ್ಮ ಪ್ರ.ದ.ಸ. 9035096205 ಇವರನ್ನು ಸಂಪರ್ಕಿಸಿ ಮಾಹಿತಿಯನ್ನು ಪಡೆಯಬಹುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
