WhatsApp Image 2024-07-12 at 4.44.07 PM

ಆಂಧ್ರ ಪ್ರದೇಶ ಗಡಿನಾಡು ಕನ್ನಡ ಶಾಲೆಗಳ ಅಭಿವೃದ್ಧಿಗೆ ಪ್ರಯತ್ನ : ಶಾಸಕ ಬಿ.ಎಂ.ನಾಗರಾಜ

ಕರುನಾಡ ಬೆಳಗು ಸುದ್ದಿ

ಸಿರುಗುಪ್ಪ, 12- ಆಂಧ್ರಪ್ರದೇಶದ ಗಡಿನಾಡ ಕನ್ನಡ ಶಾಲೆಗಳ ವಾಸ್ತವ ಪರಿಸ್ಥಿತಿ ಯನ್ನು ಸರ್ಕಾರದ ಗಮನಕ್ಕೆ ತಂದು ಸಮಸ್ಯೆ ಪರಿಹರಿಸಲು ಪ್ರಯತ್ನಿಸ ಲಾಗುವುದು ಎಂದು ಜನಪ್ರಿಯ ಶಾಸಕ ಬಿ ಎಂ ನಾಗರಾಜ ಅವರು ಹೇಳಿದರು.

ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಬಿಇಓ ಕಚೇರಿ ಆವರಣದಲ್ಲಿ ಆಂಧ್ರ ಪ್ರದೇಶದ ಗಡಿ ನಾಡು ಕನ್ನಡ ಮಾಧ್ಯಮ ಶಾಲೆಗಳ ಶಿಕ್ಷಕರಿಗೆ 1ರಿಂದ 10ನೇ ತರಗತಿವರೆಗಿನ ಕನ್ನಡ ಪಠ್ಯ ಪುಸ್ತಕಗಳನ್ನು ವಿತರಿಸಿ ಮಾತನಾಡಿ, ಈ ಹಿಂದೆ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಆಂಧ್ರಪ್ರದೇಶದ ಗಡಿನಾಡು ಕನ್ನಡ ಶಾಲೆಗಳ ಅಭಿವೃದ್ಧಿಗೆ ಕ್ರಮ ಕೈಗೊಂಡಿತು ಈಗಲೂ ಕನ್ನಡ ಶಾಲೆಗಳ ಉಳಿವು ಬೆಳವಣಿಗೆಗೆ ಶ್ರಮಿಸಲಿದೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್ ಗುರಪ್ಪ ಅವರು ಮಾತನಾಡಿದರು ಕ್ಷೇತ್ರ ಸಮನ್ವಯ ಅಧಿಕಾರಿ ತಮ್ಮನಗೌಡ ಪಾಟೀಲ್ ಬಿ ಆರ್ ಸಿ ತಿಮ್ಮನಗೌಡ ವ್ಯವಸ್ಥಾಪಕ ವಿಠ್ಠಲ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕ ಅಧ್ಯಕ್ಷ ಶ್ರೀಧರ ಸಾಕ್ಷರತಾ ಸದಸ್ಯರು ಸಮಾಜ ಕಾರ್ಯಕರ್ತ ಅಬ್ದುಲ್ ನಬಿ ಆಂಧ್ರಪ್ರದೇಶದ ಗಡಿ ನಾಡು ಶಾಲೆ ಮುಖ್ಯ ಶಿಕ್ಷಕರಾದ ದೊಡ್ಡಬಸಪ್ಪ ಮತ್ತಿತರರು ಇದ್ದರು.

Leave a Reply

Your email address will not be published. Required fields are marked *

error: Content is protected !!