WhatsApp Image 2024-04-12 at 1.57.32 PM (1)

ಅಲ್ಟ್ರಾಟೆಕ್ ಸಿಮೆಂಟ್ ಕಾರ್ಖಾನೆ ನೌಕರರು, ಕಾರ್ಮಿಕರಿಂದ ಮತದಾನ ಜಾಗೃತಿ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 12- ಲೋಕಸಭಾ ಸಾರ್ವತ್ರಿಕ ಚುನಾವಣೆ ನಿಮಿತ್ಯ ಮತದಾರರಲ್ಲಿ ಜಾಗೃತಿ ಮೂಡಿಸಲು ಕೊಪ್ಪಳ ತಾಲೂಕಿನ ಗಿಣಿಗೇರಾ ಗ್ರಾಮ ಪಂಚಾಯತಿಯಿಂದ ಗಿಣಿಗೇರಾ ಗ್ರಾಮದ ಹತ್ತಿರ ಇರುವ ಅಲ್ಟ್ರಾಟೆಕ್ ಸಿಮೆಂಟ್ ಕಾರ್ಖಾನೆ ನೌಕರರು, ಕಾರ್ಮಿಕರಿಂದ ಲೋಕಸಭಾ ಚುನಾವಣಾ ಮತದಾನ ಜಾಗೃತಿ ಜಾಥಾ ಜರುಗಿತು.

ಸ್ವೀಪ್ ಕಾರ್ಯಕ್ರಮದ ಜಾಥಾಕ್ಕೆ ತಾಲೂಕ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಹನಮಂತಪ್ಪ ಹಾಗು ಅಲ್ಟ್ರಾಟೆಕ್ ಸಿಮೆಂಟ್ ಕಂಪನಿಯ ಮಾನವ ಸಂಪನ್ಮೂಲ ಮುಖ್ಯಸ್ಥ ಪ್ರಭು ಕೊಪ್ಪದ ಚಾಲನೆ ನೀಡಿದರು. ತಾಲೂಕ ಸ್ವೀಪ್ ನೋಡಲ್ ಅಧಿಕಾರಿ ಮಾತನಾಡಿ ಮೇ-7ರಂದು ಜರುಗುವ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ಕಡ್ಡಾಯವಾಗಿ ಮತಗಟ್ಟೆ ಕೇಂದ್ರಕ್ಕೆ ಹೋಗಿ ಮತ ಚಲಾಯಿಸುವದರ ಮೂಲಕ ಸುಭದ್ರ ದೇಶವನ್ನಾಗಿ ನಿರ್ಮಿಸೋಣ. ಮತದಾನ ದಿನದಂದು ಚುನಾವಣೆ ಆಯೋಗ ನಿಗದಿಪಡಿಸಿದ ದಾಖಲಾತಿಗಳನ್ನು ತೆಗೆದುಕೊಂಡು ಹೋಗಿ ನಮಗೆ ಸೂಕ್ತ ಎನಿಸುವ ವ್ಯಕ್ತಿಗೆ ಮತ ಚಲಾಯಿಸಬೇಕು.

ಕಾರ್ಖಾನೆಯ ಎಲ್ಲಾ ನೌಕರರು, ಕಾರ್ಮಿಕರು ಕಡ್ಡಾಯವಾಗಿ ಚಾಚು ತಪ್ಪದೇ ಮತದಾನ ಮಾಡಿ ಇತರರಿಗೆ ಮಾದರಿಯಾಗಬೇಕೆಂದು ಕರೆ ನೀಡಿದರು. ಕಳೆದ ಲೋಕಸಭಾ ಚುನಾವಣೆಗಿಂತ ಈ ಬಾರಿ ವಿನೂತನವಾಗಿ ಸ್ವೀಪ್ ಕಾರ್ಯಕ್ರಮಗಳನ್ನು ಜರುಗಿಸುವ ಮೂಲಕ ಜಿಲ್ಲೆಯ ಮತದಾನ ಶೇಕಡಾವಾರು ಪ್ರಮಾಣವನ್ನು ಹೆಚ್ಚಿಸೋಣ ಎಂದರು.

ಮತದಾನ ಪವಿತ್ರವಾದ ಕಾರ್ಯ. ಮತದಾನ ಮೂಲಕ ದೇಶಕ್ಕೆ ದೊಡ್ಡ ಕೊಡುಗೆ ನೀಡಿದಂತಾಗುತ್ತದೆ ಎಂದರು. ಸ್ವೀಪ್ ಕಾರ್ಯಕ್ರಮದಲ್ಲಿ ಸೇರಿರುವ ಎಲ್ಲಾ ನರೇಗಾ ಕೂಲಿಕಾರರು ನಿಮ್ಮ ಕುಟುಂಬದ 18 ವರ್ಷ ಮೇಲ್ಪಟ್ಟ ಸದಸ್ಯರು ಮತ ಚಲಾಯಿಸುವ ಮೂಲಕ ದೇಶಕ್ಕೆ ಸುಭದ್ರ ಆಡಳಿತ ಒದಗಿಸಲು ಕೈ ಜೋಡಿಸೊಣ ಎಂದರು.

ಸ್ವೀಪ್ ಕಾರ್ಯಕ್ರಮದ ಜಾಥಾವು ಗಿಣಿಗೇರಾ ಗ್ರಾಮದ ಹೊಂಡಾ ಬೈಕ್ ಶೊರೂಮ್ ನಿಂದ ಆರಂಭವಾಗಿ ಭಾರತೀಯ ಸ್ಟೇಟ್ ಬ್ಯಾಂಕ್ದವರೆಗೆ ನಮ್ಮ ಧ್ವನಿ, ನಮ್ಮ ಮತ, ನಮ್ಮ ಮತ ನಮ್ಮ ಹಕ್ಕು, ನಮ್ಮ ಓಟು ನಮ್ಮ ಪವರ್, ನಮ್ಮ ಮತ ನಮ್ಮ ಆಯ್ಕೆ ಇತ್ಯಾದಿ ಕುರಿತು ಬಟಿಂಗ್ಸ್ ನಲ್ಲಿರುವ ಘೋಷಣೆಗಳೊಂದಿಗೆ ಸಾಗಿ ಮುಕ್ತಾಯಗೊಂಡಿತು. ನಂತರ ಕಡ್ಡಾಯ ಮತದಾನ ಮಾಡಲು ಎಲ್ಲಾ ನೌಕರರು, ಕಾರ್ಮಿಕರಿಗೆ ಮತದಾರರ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು. ಸದರಿ ಜಾಥಾದಲ್ಲಿ 120 ಕ್ಕೂ ಹೆಚ್ಚು ನೌಕರರು, ಕಾರ್ಮಿಕರು ತಮ್ಮ ಸಮವಸ್ತ್ರದೊಂದಿಗೆ ಭಾಗವಹಿಸಿ ಗ್ರಾಮಸ್ಥರನ್ನು ಮತದಾನ ಮಾಡುವಂತೆ ಮನವೋಲಿಸಿದರು. ನಂತರ ಕಂಪನಿಯ ಆವರಣದಲ್ಲಿ ಮತದಾರರ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

ಸದರಿ ಸ್ವೀಪ್ ಕಾರ್ಯಕ್ರಮದಲ್ಲಿ ಅಲ್ಟ್ರಾಟೆಕ್ ಸಿಮೆಂಟ್ ಕಂಪನಿಯ ಮಾನವ ಸಂಪನ್ಮೂಲ ಮುಖ್ಯಸ್ಥ ಪ್ರಭು ಕೊಪ್ಪದ, ತಾಂತ್ರಿಕ ವಿಭಾಗದ ಮುಖ್ಯಸ್ಥ ರವಿಕುಮಾರ, ತಾಲೂಕ ಯೋಜನಾಧಿಕಾರಿ ರಾಜೇಸಾಬ್ ನದಾಫ್, ತಾಲೂಕ ಸ್ವೀಪ್ ಸಮಿತಿ ಸದಸ್ಯರಾದ ಬಸವರಾಜ ಬಳಿಗಾರ, ವಿರೇಶ್ ಬಡಿಗೇರ, ತಾಲೂಕ ಐಇಸಿ ಸಂಯೋಜಕ ದೇವರಾಜ ಪತ್ತಾರ, ಪಂಚಾಯತ ಅಭಿವೃದ್ದಿ ಅಧಿಕಾರಿ ಮಂಜುಳಾದೇವಿ ಹೂಗಾರ, ಕಾರ್ಯದರ್ಶಿ ಮಂಜುನಾಥ, ಡಿಇಒ ರಾಜು,ರಾಜಾಭಕ್ಷಿ, ಕರವಸೂಲಿಗಾರ ಈಶ್ವರಯ್ಯ, ಕಾಯಕ ಬಂಧುಗಳು, ಕಾರ್ಖಾನೆಯ ನೌಕರರು,ಕಾರ್ಮಿಕರು ಹಾಜರಿದ್ದರು.

 

Leave a Reply

Your email address will not be published. Required fields are marked *

error: Content is protected !!