2c136fae-be38-4577-97e1-318669006cc9

ಗುಡೇಗೋಟೆ ಉತ್ಸವ :25ರಂದು

ಸಮಾರೋಪ ಸಮಾರಂಭ 

ಕರುನಾಡ ಬೆಳಗು ಸುದ್ದಿ

ವಿಜಯನಗರ,24-  ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಹಾಗೂ ವಿಜಯನಗರ ಜಿಲ್ಲಾಡಳಿತ ಇವರ ಸಹಯೋಗದಲ್ಲಿ ಗುಡೆಗೋಟೆ ಉತ್ಸವದ ಸಮಾರೋಪ ಸಮಾರಂಭವನ್ನು ಫೆಬ್ರವರಿ 25ರಂದು ಸಂಜೆ 6 ಗಂಟೆಗೆ ಗುಡೆಕೋಟೆಯ ಒನಕೆ ಓಬವ್ವ ವೇದಿಕೆಯಲ್ಲಿ ಆಯೋಜಿಸಲಾಗಿದೆ.
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರು ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮದಲ್ಲಿ ಸಮಾರೋಪ ನುಡಿಗಳನ್ನಾಡುವರು. ಹಿಂದುಳಿದ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ತಂಗಡಿಗಿ ಶಿವರಾಜ್ ಸಂಗಪ್ಪ, ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವರಾದ ಹೆಚ್.ಕೆ. ಪಾಟೀಲ್, ಕಾರ್ಮಿಕ ಸಚಿವರಾದ ಸಂತೋಷ್ ಎಸ್ ಲಾಡ್, ಯುವ ಸಬಲೀಕರಣ, ಕ್ರೀಡಾ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಬಿ.ನಾಗೇಂದ್ರ ಅವರು ಘನ ಉಪಸ್ಥಿತರಿರುವರು. ಕೂಡ್ಲಿಗಿ ಶಾಸಕರಾದ ಡಾ.ಶ್ರೀನಿವಾಸ ಎನ್.ಟಿ ಅವರು ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಬಳ್ಳಾರಿ ಸಂಸದರಾದ ವೈ.ದೇವೇಂದ್ರಪ್ಪ, ದಾವಣಗೆರೆ ಸಂಸದರಾದ ಜಿ.ಎಂ.ಸಿದ್ದೇಶ್ವರ, ಶಾಸಕರುಗಳಾದ ಹೆಚ್.ಆರ್.ಗವಿಯಪ್ಪ, ಕೆ.ನೇಮಿರಾಜ ನಾಯ್ಕ, ಕೃಷ್ಣ ನಾಯಕ, ಎಂ.ಪಿ.ಲತಾ ಮಲ್ಲಿಕಾರ್ಜುನ ಹಾಗೂ ಬಿ.ದೇವೇಂದ್ರಪ್ಪ, ವಿಧಾನ ಪರಿಷತ್ ಸದಸ್ಯರುಗಳಾದ ಡಾ.ಚಂದ್ರಶೇಖರ ಬಿ ಪಾಟೀಲ್, ಶಶಿಲ್ ಜಿ ನಮೋಶಿ, ಹಾಗೂ ವೈ.ಎಂ.ಸತೀಶ್, ಗುಡೇಕೋಟೆ ಗ್ರಾ.ಪಂ ಅಧ್ಯಕ್ಷರಾದ ಎನ್.ಕೃಷ್ಣ ಅವರು ಪಾಲ್ಗೊಳ್ಳುವರು.
ವಿಶೇಷ ಆಹ್ವಾನಿತರಾಗಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಮಾತಾ ಮಂಜಮ್ಮ ಜೋಗತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ಡಾ ಎನ್.ಮಂಜುಳಾ, ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾದ ಡಾ.ಧರಣಿದೇವಿ ಮಾಲಗತ್ತಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸದಾಶಿವ ಪ್ರಭು ಬಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀಹರಿ ಬಾಬು ಬಿ.ಎಲ್, ಉಪವಿಭಾಗಾಧಿಕಾರಿಗಳಾದ ಮೊಹಮ್ಮದ್ ಅಲಿ ಅಕ್ರಮ್ ಷಾ ಅವರು ಭಾಗವಹಿಸುವರು.

ಕಾರ್ಯಕ್ರಮದಲ್ಲಿ ವಿಜಯನಗರ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿದ್ದಲಿಂಗೇಶ್ವರ ರಂಗಣ್ಣನವರ, ಕೂಡ್ಲಿಗಿ ತಾಲ್ಲೂಕಿನ ತಹಶೀಲ್ದಾರರು ಮತ್ತು ದಂಡಾಧಿಕಾರಿಗಳಾದ ರಾಜು ಪಿರಂಗಿ, ತಾಲ್ಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಾಳದ ವೈ.ರವಿಕುಮಾರ್ ಅವರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!