
ಗ್ರಾ.ಪಂ. ಸದಸ್ಯರ ಸಮಸ್ಯೆಗಳ ಪರಿಷ್ಕಾರಕ್ಕಾಗಿ ಉಗ್ರ ಹೋರಾಟ : ಸಣ್ಣಕ್ಕಿ ಲಕ್ಷ್ಮಣ್
ಕರುನಾಡ ಬೆಳಗು ಸುದ್ದಿ
ವಿಜಯನಗರ,26- ಕರ್ನಾಟಕ ರಾಜ್ಯ ಸರ್ಕಾರವು ಗ್ರಾಮ ಪಂಚಾಯಿತಿ ಸದಸ್ಯರ ಸಮಸ್ಯೆಗಳ ಪರಿಷ್ಕಾರಕ್ಕೆ ಮುಂದಾಗದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟವನ್ನು ಮಾಡಲಿಕ್ಕೆ ಹಿಂಜರಿಯುವುದಿಲ್ಲ ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ಸದಸ್ಯರ ಮಹಾ ಒಕ್ಕೂಟದ ಸದಸ್ಯರು, ಹಾಗೂ ವಿಜಯನಗರ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ಸಣ್ಣಕ್ಕಿ ಲಕ್ಷ್ಮಣ್ ಸರ್ಕಾರವನ್ನು ಎಚ್ಚರಿಸಿದರು.
ರಾಜ್ಯದಂತ ಗ್ರಾಮ ಪಂಚಾಯಿತಿ ಸದಸ್ಯರು ಗ್ರಾಮೀಣ ಭಾಗದ ಜನರ ಸಮಸ್ಯೆಗಳು ಮತ್ತು ಗ್ರಾಮಗಳ ಅಭಿವೃದ್ಧಿಗಾಗಿ ಅಧಿಕಾರಿಗಳನ್ನು ಜೊತೆಗೂಡಿಸಿಕೊಂಡು ಶ್ರಮಿಸುತ್ತಿರುವದಾಗಿ ತಿಳಿಸಿದರು.
ಸರ್ಕಾರದ ಎಲ್ಲ ಯೋಜನೆಗಳನ್ನು ಜನರಿಗೆ ತಲುಪುವ ಜವಾಬ್ದಾರಿಯನ್ನು ಗ್ರಾಮ ಪಂಚಾಯಿತಿ ಸದಸ್ಯರು ಅಧಿಕಾರಿಗಳ ಜೊತೆಗೆ ಹಳ್ಳಿಗಳಲ್ಲಿ ಕೆಲಸ ಮಾಡುತ್ತಿದ್ದರೆ ಕೆಲ ಮಂದಿಯ ಗ್ರಾಮ ಪಂಚಾಯಿತಿ ಅಧಿಕಾರಿಗಳು, ,ಮತ್ತು ಸಿಬ್ಬಂದಿ ಇವರನ್ನು ಕಡಿಗಣಿಸುವುದು ಮತ್ತು ಸಭೆಗಳಲ್ಲಿ ಮತ್ತು ಸಮಾವೇಶಗಳಲ್ಲಿ ಸದಸ್ಯರನ್ನು ನಿರ್ಲಕ್ಷಿಸುತ್ತಿರುವದಾಗಿ ಹೇಳಿದರು.
ಇತ್ತೀಚಿಗೆ ಚಿಕ್ಕಬಳ್ಳಾಪುರ ಜಿಲ್ಲಾ, ಶಿಡ್ಲಘಟ್ಟ ತಾಲೂಕ, ಜೆ. ವೆಂಕಟಪುರ, ಗ್ರಾಮ ಪಂಚಾಯಿತಿ ಮಹಿಳಾ ಸದಸ್ಯ ಶಶಿಕಲಾ ಅಂಬರೀಶ್ ಅವರೊಂದಿಗೆ ಅಲ್ಲಿನ ಗ್ರಾಮ ಪಂಚಾಯಿತಿ ಪಿಡಿಒ ಸಾಮಾನ್ಯ ಸಭೆಯಲ್ಲಿ ನಡೆದುಕೊಂಡ ಪದ್ಧತಿ ಖಂಡನೀಯ ಎಂದರು.
ಅಲ್ಲಿನ ಪೀಡಿಓಗಳು, ಅವರ ಪ್ರಶ್ನೆಗಳಿಗೆ ಸಮಾವೇಶದಲ್ಲಿ ಸರಿಯಾದ ಸಮಾಧಾನ ನೀಡದೆ, ನಿರ್ಲಕ್ಷವಾಗಿ ವ್ಯವಹರಿಸಿದ ರೀತಿ ಸಭೆಗೆ ಶೋಭೆ ತರುವುದಿಲ್ಲ ಎಂದರು.
ಈಗಾಗಲೇ ಈ ವಿಷಯಕ್ಕೆ ಸಂಬಂಧಪಟ್ಟ ತಮ್ಮ ಒಕ್ಕೂಟ ಕರ್ನಾಟಕ ಪಂಚಾಯತ್ ರಾಜ್ ಆಯುಕ್ತರಾದ, ಶ್ರೀಮತಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರಿಗೆ ದೂರು ನೀಡಲಾಗಿದೆ ಎಂದರು.
ರಾಜ್ಯ ಸರ್ಕಾರವು ಕೂಡಲೇ ಈ ವಿಷಯದ ಮೇಲೆ ಗಮನಹರಿಸಿ, ಸಂಬಂಧಿತ ಪಿಡಿಒ ಅವರನ್ನು ವಿಚಾರಣೆ ನಡೆಸಿ ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ವಹಿಸದಿದ್ದರೆ, ರಾಜ್ಯಾದ್ಯಂತ ತಮ್ಮ ಒಕ್ಕೂಟ ನೇತೃತ್ವದಲ್ಲಿ ಉಗ್ರ ಹೋರಾಟ ಕೈಗೊಳ್ಳಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರ ನೀಡಿದರು.
ಸಮಾಜ ಸಮಾಜದಲ್ಲಿ ಗೌರವಕ್ಕಾಗಿ ಕೆಲಸ ಮಾಡುತ್ತಿರುವ ಗ್ರಾಮ ಪಂಚಾಯತಿ ಸದಸ್ಯರನ್ನು ಅಧಿಕಾರಿಗಳು ಮತ್ತು ಸಿಬ್ಬಂದಿ ಈ ರೀತಿ ನಿರ್ಲಕ್ಷ ಭಾವದಿಂದ ನೋಡಿದರೆ ಮುಂದಿನ ದಿನಗಳಲ್ಲಿ ಸರ್ಕಾರಕ್ಕೆ ಕೆಟ್ಟು ಹೆಸರು ಬರುವ ಅವಕಾಶ ಇರುವುದರಿಂದ ಮಾನ್ಯ ಪಂಚಾಯತ್ ರಾಜ್ ಸಚಿವರು ಹಾಗೂ ಸಂಬಂಧಿತ ಇಲಾಖೆ ಅಧಿಕಾರಿಗಳು. ಗ್ರಾಮ ಪಂಚಾಯತಿ ಸದಸ್ಯರ ಹಕ್ಕುಗಳ ರಕ್ಷಣಾ ಮತ್ತು ಉತ್ತಮ ಆಡಳಿತಕ್ಕಾಗಿ ಕ್ರಮವಹಿಸಲು ಈ ಮೂಲಕ ಮನವಿ ಮಾಡುತ್ತಿರುವುದಾಗಿ ತಿಳಿಸಿದರು.
ಯಾವುದೇ ಗ್ರಾಮ ಪಂಚಾಯಿತಿಯಲ್ಲಿ ಈ ರೀತಿಯಾದ ಸಮಸ್ಯೆಯೂ ಉದ್ಭವವಾದಾಗ, ಮೇಲ್ಭಾಗದ ಅಧಿಕಾರಿಗಳು ಆಶ್ವಾಸನೆಗಳು ನೀಡುತ್ತಾ ಕಾಲ ಕಳೆಯುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದರು.
ಈ ಸಮಸ್ಯೆ ಕೇವಲ ಒಂದು ಗ್ರಾಮ ಪಂಚಾಯಿತಿಗೆ ಮಾತ್ರವೇ ಸೀಮಿತವಲ್ಲದೆ ರಾಜ್ಯದ್ಯಂತ ಈ ರೀತಿಯಾಗಿ ಏನೋ ಒಂದು ಸಮಸ್ಯೆಯನ್ನು ಸದಸ್ಯರು ಎದುರಿಸುತ್ತಿರುವದಾಗಿ ತಿಳಿಸಿದರು.
ಪಂಚಾಯತ್ ರಾಜ್ ಇಲಾಖೆ ಸಚಿವರು ಇಲಾಖೆ ಅಧಿಕಾರಿಗಳು ಕ್ರಮವಹಿಸದಿದ್ದರೆ, ಆ ಮಹಿಳೆ ಗ್ರಾಮ ಪಂಚಾಯಿತಿ ಸದಸ್ಯ ಪರವಾಗಿ ರಾಜ್ಯದ್ಯಂತ ಉಗ್ರ ಹೋರಾಟ ಕೈಗೊಳ್ಳಲಾಗಬೇಕ ಗೊತ್ತದೆ ಎಂದು ಎಚ್ಚರಿಕೆ ನೀಡಿದರು.