
ಬಾಬು ಜಗಜೀವನ್ ರಾವ್ ಚರ್ಮ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಮುಂಡ್ರಿಗಿ ನಾಗರಾಜ್
ಕರುನಾಡ ಬೆಳಗು ಸುದ್ದಿ
ಬಳ್ಳಾರಿ,29- ಬಳ್ಳಾರಿ ಜಿಲ್ಲೆಯ ಪರಿಶಿಷ್ಟ ಜಾತಿ ಸಮುದಾಯದ ಮುಖಂಡರು ಹಾಗೂ ಸಚಿವ ಸಂತೋಷ್ ಲಾಡ್ ಅವರ ಆಪ್ತರಾದ ಮುಂಡ್ರಿಗಿ ನಾಗರಾಜ್ ಅವರಿಗೆ ಕರ್ನಾಟಕ ಸರ್ಕಾರವು ಬಾಬು ಜಗಜೀವನ್ ರಾಂ ಚÀರ್ಮ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನವನ್ನು ನೀಡಿದೆ.
ಮುಂಡ್ರಿಗಿ ನಾಗರಾಜ್ ಅವರು ಮೊದಲು ಬಹುಜನ ಸಮಾಜ ಪಕ್ಷ, ಜನತಾದಳ ಪಕ್ಷಗಳಲ್ಲಿದ್ದರು. ನಂತರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಶ್ರಮಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಶ್ರಮವನ್ನು ಗುರುತಿಸಿರುವ ಕಾಂಗ್ರೆಸ್ ಸರ್ಕಾರವು ಅವರಿಗೆ ಸದರಿ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ.