2c136fae-be38-4577-97e1-318669006cc9

ಚುನಾವಣೆ ಹಿನ್ನೆಲೆ : ಮದ್ಯೆ ಮಾರಾಟ ನಿಷೇಧಿಸಿ ಆದೇಶ

ಕರುನಾಡ ಬೆಳಗು ಸುದ್ದಿ

ವಿಜಯನಗರ, 1- ಕರ್ನಾಟಕ ಈಶಾನ್ಯ ಪದವೀಧರರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ-2024ರ ಮತದಾನ ದಿನದಂದು ಮತ್ತು ಸಾರ್ವಾತ್ರಿಕ ಲೋಕಸಭಾ ಚುನಾವಣೆ-2024ರ ಮತ ಎಣಿಕೆ ಪ್ರಯುಕ್ತ ಜೂನ್ 01ರ ಅಪರಾಹ್ನ 04 ಗಂಟೆಯಿAದ ಅನ್ವಯವಾಗುವಂತೆ ಜೂನ್ 05ರ ಬೆಳಿಗ್ಗೆ 06 ಗಂಟೆಯವರೆಗೆ ವಿಜಯನಗರ ಜಿಲ್ಲೆಯಲ್ಲಿರುವ ಎಲ್ಲಾ ತರಹದ ಮದ್ಯದ ಅಂಗಡಿ, ಬಾರ್ ಮತ್ತು ರೆಸ್ಟೋರೆಂಟ್‌ಗಳನ್ನು ಮುಚ್ಚುವಂತೆ ಹಾಗೂ ಎಲ್ಲಾ ರೀತಿಯ ಮದ್ಯ ತಯಾರಿಕಾ ಘಟಕಗಳು ಸಾಗಾಣಿಕೆ ಮತ್ತು ಸಂಗ್ರಹಣೆಯನ್ನು ಮತ್ತು ಮದ್ಯ ಸಾಗಾಟ ನಿಷೇಧಿಸಿ ಒಣ ದಿನ ಎಂದು ಘೋಷಿಸಿ ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ ಅವರು ಆದೇಶ ಹೊರಡಿಸಿದ್ದಾರೆ.

ಕರ್ನಾಟಕ ಈಶಾನ್ಯ ಪದವೀಧರರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ-2024ರ ಮತದಾನವು ಮತ್ತು ಸಾರ್ವಾತ್ರಿಕ ಲೋಕಸಭಾ ಚುನಾವಣೆ-2024ರ ಮತ ಎಣಿಕೆ ಕಾರ್ಯದ ದಿನದಂದು ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಪ್ರಜಾ ಪ್ರತಿನಿಧಿ ಕಾಯ್ದೆ, 1951ರ ಕಲಂ 135(ಸಿ) ಹಾಗೂ ಕರ್ನಾಟಕ ಅಬಕಾರಿ (ಸನ್ನದುಗಳ ಸಾಮಾನ್ಯ ಷರತ್ತುಗಳು) ನಿಯಮಗಳು, 1967ರ ನಿಯಮ 10 (ಬಿ) ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಜಿಲ್ಲಾಧಿಕಾರಿಗಳು ಈ ಆದೇಶ ಹೊರಡಿಸಿದ್ದಾರೆ.

ಈ ಆದೇಶದಲ್ಲಿನ ಸೂಚನೆಯನ್ನು ಉಲ್ಲಂಘಿಸಿದಲ್ಲಿ ಅಂಥವರು ಪ್ರಜಾ ಪ್ರತಿನಿಧಿ ಕಾಯ್ದೆ 1951 ರ ಕಲಂ 135ಸಿ (2) ಮತ್ತು (3) ರನ್ವಯ ಶಿಕ್ಷೆಗೆ ಒಳಪಡುವರು ಎಂದು ಆದೇಶದಲ್ಲಿ ತಿಳಿಸಲಾಗಿದೆ.

 

Leave a Reply

Your email address will not be published. Required fields are marked *

error: Content is protected !!