
oplus_2
ಜಿಲ್ಲಾಧಿಕಾರಿಗಳಿಂದ ಪೋಸ್ಟರ್ ಬಿಡುಗಡೆ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 1- ಕೃಷಿ ಇಲಾಖೆಯಿಂದ 2024-25 ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಡಿ ರೈತರ ಬೆಳೆವಿಮೆ ನೋಂದಾಯಿಸುವ ಬಗ್ಗೆ ಹಾಗೂ ಅಧಿಸೂಚಿತ ಬೆಳೆಗಳು ಹಾಗೂ ಬೆಳೆ ವಿಮೆ ಮೊತ್ತದ ಮಾಹಿತಿ ಇರುವ ಪೋಸ್ಟರ್‌ಗಳು ಹಾಗೂ ಡಿಎಪಿ ರಸಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರಗಳ ಬಳಕೆ ಕುರಿತ ಪೋಸ್ಟರ್‌ಗಳನ್ನು ಶುಕ್ರವಾರದಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಬಿಡುಗಡೆಗೊಳಿಸಿದರು. ಈ ಸಂದರ್ಭ ಜಂಟಿ ಕೃಷಿ ನಿರ್ದೇಶಕರಾದ ರುದ್ರೇಶಪ್ಪ ಟಿ.ಎಸ್. ಸೇರಿದಂತೆ ಕೃಷಿ ಇಲಾಖೆಯ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.