ಜಿಲ್ಲಾ ಮಟ್ಟದ ಸಿರಿಧಾನ್ಯ ನಡಿಗೆ ಜ.04ರಂದು
ಕರುನಾಡ ಬೆಳಗು ಸುದ್ದಿ
ಬಳ್ಳಾರಿ, ೦೩- ಅಂತರಾಷ್ಟ್ರೀಯ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳ-2024ರ ಅಂಗವಾಗಿ ಸಿರಿಧಾನ್ಯ ಬಳಕೆ ಕುರಿತು ಹಾಗೂ ಆರೋಗ್ಯ ದೃಷ್ಠಿಯಿಂದ ಕೃಷಿ ಇಲಾಖೆ ವತಿಯಿಂದ ಜ.04ರಂದು ಬೆಳಿಗ್ಗೆ 06.30 ಕ್ಕೆ ರೈಲ್ವೇ ನಿಲ್ದಾಣ ಎದುರಿನ ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ ಜಿಲ್ಲಾ ಮಟ್ಟದ ಸಿರಿಧಾನ್ಯ ನಡಿಗೆ ಹಮ್ಮಿಕೊಳ್ಳಲಾಗಿದೆ ಎಂದು ಕೃಷಿ ಜಂಟಿ ನಿರ್ದೇಶಕ ಕೆ.ಮಲ್ಲಿಕಾರ್ಜುನ ಅವರು ತಿಳಿಸಿದ್ದಾರೆ.
ಮಾರ್ಗ ನಕ್ಷೆ: ಜಿಲ್ಲಾ ಮಟ್ಟದ ಸಿರಿಧಾನ್ಯ ನಡಿಗೆಯು ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ ಆರಂಭವಾಗಿ ಹೆಚ್.ಆರ್.ಗವಿಯಪ್ಪ ವೃತ್ತದಿಂದ ಎಸ್.ಪಿ.ವೃತ್ತ ಮೂಲಕ ಕನಕದುರ್ಗಮ್ಮ ದೇವಸ್ಥಾನ ಮಾರ್ಗವಾಗಿ ಗಡಿಗಿ ಚೆನ್ನಪ್ಪ ವೃತ್ತದ ಮೂಲಕ ಮರಳಿ ಜಿಲ್ಲಾಧಿಕಾರಿಗಳ ಕಚೇರಿ ಆವರಣ ತಲುಪಲಿದೆ. ಜಿಲ್ಲಾ ಮಟ್ಟದ ಸಿರಿಧಾನ್ಯ ನಡಿಗೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಅವರು ಕೋರಿದ್ದಾರೆ.