c0638863-af72-45ae-a88b-f3b6b93a00a1

ಜಿಲ್ಲಾ ಸ್ವೀಪ್ ಸಮಿತಿಯಿಂದ ಮುಂದುವರೆದ ಸಹಿ ಸಂಗ್ರಹ ಅಭಿಯಾನ

ಕರುನಾಡ ಬೆಳಗು ಸುದ್ದಿ

ವಿಜಯನಗರ, 2- ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ಮತದಾನ ಜಾಗೃತಿಗಾಗಿ ಸಹಿ ಸಂಗ್ರಹ ಅಭಿಯಾನ ಕಾರ್ಯಕ್ರಮಗಳು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಸ್ವೀಪ್ ಸಮಿತಿಯಿಂದ ಮುಂದುವರೆದಿವೆ.

ಹೊಸಪೇಟೆ ನ್ಯಾಯಾಲಯದ ಸಂಕೀರ್ಣದಲ್ಲಿ ವಕೀಲರ ಸಂಘದ ಸಹಯೋಗದಲ್ಲಿ ಏಪ್ರೀಲ್ 2ರಂದು ನಡೆದ ಮತದಾನ ಜಾಗೃತಿ ಅಭಿಯಾನ ಹಾಗೂ ಮತದಾನ ಜಾಗೃತಿ ಸಹಿ ಸಂಗ್ರಹ ಅಭಿಯಾನಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಸದಾಶಿವ ಪ್ರಭು ಬಿ ಅವರು ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ಮತದಾನ ಮಾಡುವುದು ನಮಗೆಲ್ಲರಿಗೂ ಸಂವಿಧಾನಬದ್ಧವಾಗಿ ಬಂದಿರುವ ಹಕ್ಕಾಗಿದೆ. ಕಡ್ಡಾಯವಾಗಿ ಪ್ರತಿಯೊಬ್ಬರು ಮತದಾನ ಮಾಡಿ ಉತ್ತಮ ವ್ಯಕ್ತಿಯನ್ನು ಆಯ್ಕೆ ಮಾಡಬೇಕು ಎಂದು ತಿಳಿಸಿದರು.

ಸಮಾರಂಭದಲ್ಲಿ ಗೌರವಾನ್ವಿತ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರಾದ ಹೇಮಲತಾ ಬಿ. ಹುಲ್ಲೂರ, ಗೌರವಾನ್ವಿತ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಅಬ್ದುಲ್ ರಹಿಮಾನ್ ನಂದಗಡಿ, ಅಪರ ಹಿರಿಯ ಸಿವಿಲ್ ನ್ಯಾಯಧೀಶರಾದ ರಮೇಶ್‌ಬಾಬು ಬಿ.ಎನ್., ಗೌರವಾನ್ವಿತ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಕಿಷನ್ ಬಿ.ಮಾಡಲಗಿ, ಗೌರವಾನ್ವಿತ 1ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಶ್ರೀಮತಿ ತೃಪ್ತಿ ಧರಣಿ, ಗೌರವಾನ್ವಿತ 2ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಸಂಜೀವ್‌ಕುಮಾರ್ ಜಿ., 3ನೇ ಅಪರ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ ನ್ಯಾಯಾಧೀಶರಾದ ಚೈತ್ರಾ ಜೆ., ನಗರಸಭೆ ಪೌರಾಯುಕ್ತರಾದ ಸಿ.ಚಂದ್ರಪ್ಪ, ವಕೀಲರ ಸಂಘದ ಅಧ್ಯಕ್ಷರಾದ ಕೆ.ಪ್ರಹ್ಲಾದ್, ಜಿಲ್ಲಾ ಪಂಚಾಯತಿಯ ಯೋಜನಾ ಅಂದಾಜು ಮತ್ತು ಮೌಲ್ಯಮಾಪನಾಧಿಕಾರಿ ಪತ್ರಿಬಸಪ್ಪ ಎನ್.ಕೆ ಹಾಗೂ ವಕೀಲರು, ತಾಲೂಕು ಪಂಚಾಯತಿ ಸಿಬ್ಬಂದಿ ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!