ಬಸವರಾಜ್ ಹಿಟ್ನಾಳ್, ಅಮರೇಶ ಉಪಲಾಪುರ ಆಯ್ಕೆ
ಜಿಲ್ಲೆಯ ಇಬ್ಬರಿಗೆ ಸಹಕಾರ ರತ್ನ ಪ್ರಶಸ್ತಿ
ಕರುನಾಡ ಬೆಳಗು ಸುದ್ದಿ
ಕೊಪ್ಪಳ17- ಮಾಜಿ ಶಾಸಕ ಹಾಗೂ ಜಿಲ್ಲೆಯ ಪ್ರಭಾವಿ ಮುಖಂಡ ಕೆ. ಬಸವರಾಜ ಹಿಟ್ನಾಳ ಹಾಗೂ ಸಹಕಾರಿ ಧುರೀಣ ಅಮರೇಶ ಉಪಲಾಪೂರ ಅವರಿಗೆ ಪ್ರಸಕ್ತ ಸಾಲಿನ ‘ಸಹಕಾರ ರತ್ನ’ ಪ್ರಶಸ್ತಿ ಘೋಷಣೆ ಮಾಡಲಾಗಿದೆ.
ರಾಜ್ಯ ಸರ್ಕಾರ ಪ್ರತಿವರ್ಷ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ನಿಯಮಿತದ ವತಿಯಿಂದ ನೀಡಲಾಗುವ ‘ಸಹಕಾರ ರತ್ನ’ ಪ್ರಶಸ್ತಿಗೆ ಜಿಲ್ಲೆಯ ಮಾಜಿ ಶಾಸಕ ಬಸವರಾಜ್ ಹಿಟ್ನಾಳ್ ಮತ್ತು ತಾಲ್ಲೂಕಿನ ಕಿನ್ನಾಳ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಅಮರೇಶ ಉಪಲಾಪುರ ರಾಜ್ಯ ಸಹಕಾರ ಚಳುವಳಿಯ ಬೆಳವಣಿಗೆಗೆ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಪ್ರಶಸ್ತಿ ಘೋಷಿಸಿದೆ.

ಅಮರೇಶ ಉಪಲಾಪುರ : ಅವರು ಕಿನ್ನಾಳದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಶ್ರೀಬೀರಲಿಂಗೇಶ್ವರ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘ, ಕೊಪ್ಪಳದ
ಜಿಲ್ಲಾ ಸಹಕಾರಿ ಯೂನಿಯನ್, ಕಾಳಿದಾಸ್ ಶಿಕ್ಷಣ ಸಂಸ್ಥೆ ಮತ್ತು ದೆಹಲಿಯ ಇಫ್ಕೋ ಆರ್.ಜಿ.ಬಿ ಮೇಂಬರದ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಅವರ ಸೇವೆಗೆ ಈ ಪ್ರಶಸ್ತಿ ಒಲಿದಿದೆ.
೭೦ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪವು ವಿಜಯಪುರದ ಜಿಲ್ಲಾ ಕೇಂದ್ರ ಬ್ಯಾಂಕಿನ ಆವರಣದಲ್ಲಿ ನ. ೨೦ರಂದು ನಡೆಯಲಿದ್ದು, ಕಾರ್ಯಕ್ರಮದಲ್ಲಿ ಪ್ರಶಸ್ತಿಗೆ ಆಯ್ಕೆಯಾದ ಸಹಕಾರಿಗಳಿಗೆ ಪ್ರದಾನ ಮಾಡಲಾಗುತ್ತದೆ.
ಕೊಪ್ಪಳ ಜಿಲ್ಲೆಯ ಇಬ್ಬರಿಗೆ ಪ್ರಶಸ್ತಿ ದೊರೆತಿರುವುದು ಸಂತಸ ತಂದಿದೆ ಎಂದು ಜಿಲ್ಲೆಯ ಸಹಕಾರಿಗಳು ಸಂತಸ ಹಂಚಿಕೊಂಡಿದ್ದಾರೆ.
