
ಜುಲೈ 13 ರಂದು ರಾಷ್ಟ್ರೀಯ ಲೋಕ ಅದಾಲತ್
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 27- ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ನಿರ್ದೇಶನದ ಮೇರೆಗೆ ಕೊಪ್ಪಳ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಜುಲೈ 13 ರಂದು ರಾಷ್ಟಿçÃಯ ಲೋಕ್ ಅದಾಲತ್ ಅನ್ನು ಹಮ್ಮಿಕೊಳ್ಳಲಾಗಿದೆ.
ಜಿಲ್ಲೆಯ ಕೊಪ್ಪಳ, ಗಂಗಾವತಿ, ಕುಷ್ಟಗಿ ಮತ್ತು ಯಲಬುರ್ಗಾ ನ್ಯಾಯಾಲಯಗಳಲ್ಲಿ ಚಾಲ್ತಿ ಇರುವ ಪ್ರಕರಣಗಳು ಹಾಗೂ ಇನ್ನೂ ನ್ಯಾಯಾಲಯಕ್ಕೆ ದಾಖಲಿಸದೇ ಇರುವ ಪ್ರಕರಣಗಳನ್ನು ವ್ಯಾಜ್ಯಪೂರ್ವ ಪ್ರಕರಣಗಳು ಎಂದು ಪರಿಗಣಿಸಿ, ವಿವಿಧ ಪ್ರಕರಣಗಳಾದ ಮೋಟಾರು ವಾಹನ ಅಪಘಾತ ಪರಿಹಾರದ ಪ್ರಕರಣಗಳು, ಅಸಲು ದಾವೆಗಳು, ಬ್ಯಾಂಕುಗಳಿಗೆ ಸಂಬAಧಿಸಿದ ಪ್ರಕರಣಗಳು, ಭೂಸ್ವಾಧೀನ ಪ್ರಕರಣಗಳು, ವೈವಾಹಿಕ ಹಾಗೂ ಜೀವನಾಂಶ ಪ್ರಕರಣಗಳು, ಕಾನೂನಿನನ್ವಯ ರಾಜೀ ಆಗಬಹುದಾದ ಕ್ರಿಮಿನಲ್ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು, ರಾಜೀ ಆಗಬಹುದಾದ ಎಲ್ಲಾ ತರಹದ ಪ್ರಕರಣಗಳನ್ನು ಜುಲೈ 13 (2ನೇ ಶನಿವಾರ) ರಂದು ಆಯಾ ನ್ಯಾಯಾಲಯಗಳಲ್ಲಿ ಇತ್ಯರ್ಥಪಡಿಸಿಕೊಳ್ಳಲು ರಾಷ್ಟ್ರೀಯ ಲೋಕ್ ಅದಾಲತ್‌ನ್ನು ಏರ್ಪಡಿಸಲಾಗಿದೆ.
ಕಕ್ಷಿದಾರರು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಪ್ರಧಾನ ಜಿಲ್ಲಾ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಸಿ. ಚಂದ್ರಶೇಖರ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಲಕಾರಿ ರಾಮಪ್ಪ ಒಡೆಯರ್ ಅವರು ಜಂಟಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.