
ಜುಲೈ 6ರಂದು ಹರಪನಹಳ್ಳಿಯಲ್ಲಿ ಜನಸ್ಪಂದನಾ ಕಾರ್ಯಕ್ರಮ
ಕರುನಾಡ ಬೆಳಗು ಸುದ್ದಿ
ವಿಜಯನಗರ, 28- ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನಲ್ಲಿ ಜುಲೈ 6 ರಂದು ಜನಸ್ಪಂದನಾ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಎಂ.ಎಸ್. ದಿವಾಕರ್ ತಿಳಿಸಿದ್ದಾರೆ.
ಈ ಮೊದಲು ಹರಪನಹಳ್ಳಿ ತಾಲೂಕಿನಲ್ಲಿ ಜುಲೈ 1 ರಂದು ಜನಸ್ಪಂದನಾ ಕಾರ್ಯಕ್ರಮ ನಿಗದಿಯಾಗಿತ್ತು. ಜುಲೈ 1ರ ಬದಲಾಗಿ ಈ ಕಾರ್ಯಕ್ರಮವನ್ನು ಜುಲೈ 6ರಂದು ನಿಗದಿಪಡಿಸಲಾಗಿದೆ. ಎಲ್ಲಾ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಕಾರ್ಯಕ್ರಮಕ್ಕೆ ಕಡ್ಡಾಯವಾಗಿ ಹಾಜರಾಗಬೇಕು ಎಂದು ಅವರು ತಿಳಿಸಿದ್ದಾರೆ.