1eaca249-daf2-4da4-a1be-e2cb37788bf8

6ರಿಂದ ಜಿಲ್ಲಾ ನ್ಯಾಯಾಲಯದಲ್ಲಿ ಆರೋಗ್ಯ ಕೇಂದ್ರ ಕಾರ್ಯಾರಂಭ

ನ್ಯಾ. ಎಂ.ಆರ್.ಒಡೆಯರ್

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 5- ಕೊಪ್ಪಳ ಜಿಲ್ಲಾ ನ್ಯಾಯಾಲಯದ ಆವಣದಲ್ಲಿ ಪ್ರಾರಂಭಿಸಲಾದ ಆರೋಗ್ಯ ಕೇಂದವು ಜುಲೈ 6ರಿಂದ ಕಾರ್ಯನಿರ್ವಹಿಸಲಿದೆ ಎಂದು ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಎಂ.ಆರ್.ಒಡೆಯರ್ ಅವರು ತಿಳಿಸಿದ್ದಾರೆ.

ಜಿಲ್ಲಾ ನ್ಯಾಯಾಲಯದ ಆವಣದಲ್ಲಿರುವ ಜಿಲ್ಲಾ ಕಾನೂ ಸೇವೆಗಳ ಪ್ರಾಧಿಕಾರಿದ ಕಚೇರಿಯಲ್ಲಿ ಜುಲೈ 5ರಂದು ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.

ಕೊಪ್ಪಳ ಜಿಲ್ಲೆಯ ನ್ಯಾಯಾಲಯ ಆವರಣದಲ್ಲಿ ಇದುವರೆಗೂ ಆರೋಗ್ಯ ಕೇಂದ್ರವಿರಲಿಲ್ಲ. ನ್ಯಾಯಾಲಯಕ್ಕೆ ಪ್ರತಿನಿತ್ಯ ಬರುವ ನೂರಾರು ಕಕ್ಷೀದಾರರು, ವಕೀಲರು, ನ್ಯಾಯಾಲಯದ ಸಿಬ್ಬಂದಿಗಳಿಗೆ ಸಣ್ಣ-ಪುಟ್ಟ ಆರೋಗ್ಯ ಸಮಸ್ಯೆ ಉಂಟಾದರೂ ಸಹ ಜಿಲ್ಲಾಸ್ಪತ್ರೆಗೆ ಕಳುಹಿಸುವ ಅನಿವಾರ್ಯತೆ ಇತ್ತು. ಈ ವಿಷಯವನ್ನು ಗಮನದಲ್ಲಿಟ್ಟುಕೊಂಡ ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸಿ.ಚಂದ್ರಶೇಖರ ಅವರು ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಆರೋಗ್ಯ ಕೇಂದ್ರ ಪ್ರಾರಂಭಕ್ಕೆ ಅನುವು ಮಾಡಿದರು.

ಈ ಆರೋಗ್ಯ ಕೇಂದವನ್ನು ಜುಲೈ 6ರಂದು ಗೌರವಾನ್ವಿತ ಕೊಪ್ಪಳ ಜಿಲ್ಲೆಯ ಆಡಳಿತಾತ್ಮಕ ನ್ಯಾಯಾಧೀಶರು ಆಗಿರುವ, ಹೈಕೋರ್ಟ ನ್ಯಾಯಾಧೀಶರಾದ ಎಂ.ಜಿ ಶುಕುರೆ ಕಮಾಲ ಅವರು ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಜಿಲ್ಲಾ ನ್ಯಾಯಾಧೀಶರು, ಜಿಲ್ಲಾ ಆರೋಗ್ಯಾಧಿಕಾರಿಗಳು, ವಕೀಲರ ಸಂಘದ ಅಧ್ಯಕ್ಷರು ಹಾಗೂ ಎಲ್ಲಾ ವಕೀಲರು ಪಾಲ್ಗೊಳ್ಳಲಿದ್ದಾರೆ. ಆರೋಗ್ಯ ಕೇಂದ್ರವು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಕಾರ್ಯನಿರ್ವಹಿಸಲಿದೆ ಎಂದು ಹೇಳಿದರು.

ರಾಜೀ ಸಂದಾನದ ಮೂಲಕ ಪ್ರಕರಣಗಳ ಇತ್ಯರ್ಥಕ್ಕೆ ಅವಕಾಶ : ಇದೇ ಜುಲೈ 13ರಂದು ರಾಷ್ಟ್ರೀಯ ಮೇಗಾ ಲೋಕ್ ಅದಾಲತ್ ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ರಾಜೀ ಆಗಬುಹುದಾದ ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗುವುದು. ಈ ಕಾರ್ಯಕ್ರಮದ ಬಗ್ಗೆ ಕರಪತ್ರಗಳ ವಿತರಣೆ, ಬಸ್ ನಿಲ್ದಾಣಗಳ ಧ್ವನಿವರ್ಧಕಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳು ಕಸವಿಲೇವಾರಿಗಳ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುತ್ತಿದೆ. ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ತಕ್ಷಣ ಪರಿಹಾರ ಪಡೆದುಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ. ಕಡಿಮೆ ಖರ್ಚಿನಲ್ಲಿ ಇಲ್ಲವೇ ಖರ್ಚು ಇಲ್ಲದೇ ಶೀಘ್ರ ತೀರ್ಮಾನಕ್ಕಾಗಿ ಲೋಕ್ ಅದಾಲತ್ ಒಂದು ವಿಶೇಷ ಅವಕಾಶವಾಗಿದ್ದು, ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳ ದಾವೆದಾರರು ಹಾಗೂ ಕಕ್ಷಿದಾರರು ಈ ಲೋಕ ಅದಾಲತ್‌ನಲ್ಲಿ ಭಾಗವಹಿಸಿ ಕಾನೂನು ಮೂಲಕ ರಾಜಿ ಆಗಬಹುದಾದ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದರು.

ಆಸ್ತಿ ತೆರಿಗೆ ಪಾವತಿಗೆ ರೀಯಾಯಿತಿ ಅವಧಿ ವಿಸ್ತರಣೆ : ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಗೌರವಾನ್ವಿತ ಕಾರ್ಯನಿರ್ವಾಹಕ ಅಧ್ಯಕ್ಷರ ನಿರ್ದೇಶನದ ಮೇರೆಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ನಗರ ಸ್ಥಳೀಯ ಸಂಸ್ಥೆಗಳ 2024-25ನೇ ಸಾಲಿನ ಆಸ್ತಿ ತೆರಿಗೆ ಪಾವತಿಗೆ ಏಪ್ರೀಲ್ ತಿಂಗಳವರೆಗೆ ನೀಡಲಾಗಿರುವ ಶೇ.5ರ ರೀಯಾಯಿತಿಯನ್ನು ಲೋಕ್ ಅದಾಲ್ ಸಲುವಾಗಿ ಜುಲೈ 31ರವರೆಗೆ ವಿಸ್ತರಿಸಿದ್ದಾರೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಅವರು ತಿಳಿಸಿದರು.

6ರಂದು ಜಿಲ್ಲಾ ನ್ಯಾಯಾಲಯದಲ್ಲಿ ಆರೋಗ್ಯ ಕೇಂದ್ರದ ಉದ್ಘಾಟನೆ ಕಾರ್ಯಕ್ರಮ :

ಜಿಲ್ಲಾ ನ್ಯಾಯಾಂಗ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ವಕೀಲರ ಸಂಘ ಇವರ ಸಹಯೋಗದಲ್ಲಿ ಆರೋಗ್ಯ ಕೇಂದ್ರದ ಉದ್ಘಾಟನೆ ಕಾರ್ಯಕ್ರಮವನ್ನು ಜುಲೈ 06ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ನ್ಯಾಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ.

ಗೌರವಾನ್ವಿತ ಕೊಪ್ಪಳ ಜಿಲ್ಲೆಯ ಆಡಳಿತಾತ್ಮಕ ನ್ಯಾಯಾಧೀಶರು ಆಗಿರುವ ಕರ್ನಾಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಎಂ.ಜಿ ಶುಕುರೆ ಕಮಾಲ ಅವರು ಕಾರ್ಯಕ್ರಮ ಉದ್ಘಾಟಿಸುವರು. ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸಿ.ಚಂದ್ರಶೇಖರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ ಟಿ.ಲಿಂಗರಾಜು, ಕೊಪ್ಪಳ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಎ.ವಿ.ಕಣವಿ ಹಾಗೂ ಜಿಲ್ಲಾ ವಕೀಲರ ಸಂಘದ ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು ಎಂದು ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಎಂ.ಆರ್.ಒಡೆಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!