
ಜು. 13ರಂದು ರಾಷ್ಟ್ರೀಯ ಲೋಕ ಅದಾಲತ್ : ನ್ಯಾ:ಪ್ರಶಾಂತ ನಾಗಲಾಪುರ
ಕರುನಾಡ ಬೆಳಗು ಸುದ್ದಿ
ವಿಜಯನಗರ, 25- ಜನರು ದ್ವೇಷ ಮರೆತು ಸಹಬಾಳ್ವೆ ನಡೆಸಬೇಕು ಎಂಬ ಧ್ಯೇಯದೊಂದಿಗೆ ಜುಲೈ 13ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಹೊಸಪೇಟೆಯ ಪ್ರಧಾನ ಸಿವಿಲ್ ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ಪ್ರಶಾಂತ ನಾಗಲಾಪುರ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ನ್ಯಾಯಾಧೀಶರು, ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ಜುಲೈ 13ರಂದು ಲೋಕ ಅದಾಲತ್ ನಡೆಸಲು ಅನುಮತಿ ನೀಡಿದೆ. ಪ್ರಾಧಿಕಾರಿಗಳ ನಿರ್ದೇಶನದಂತೆ ರಾಜ್ಯಾದ್ಯಂತ ಏಕಕಾಲಕ್ಕೆ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ.
ಹೊಸಪೇಟೆ ತಾಲೂಕು ಕಾನೂನು ಸೇವಾ ಸಮಿತಿಯಡಿಯಲ್ಲಿ 7 ನ್ಯಾಯಾಲಯದಲ್ಲಿ ಲೋಕ ಅದಾಲತ್ ನಡೆಯಲಿದ್ದು, ಗೌರವಾನ್ವಿತ 3ನೇ ಹೆಚ್ಚುವರಿ ಮತ್ತು ಜಿಲ್ಲಾ ನ್ಯಾಯಾಧೀಶರಾದ ಅಬ್ದುಲ್ ರಹೀಮಾನ್.ಎ.ನಂದಗಡಿ, ಗೌರವಾನ್ವಿತ ಪ್ರಧಾನ ಹಿರಿಯ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಧೀಶರಾದ ಹೇಮಲತಾ ಬಿ.ಹುಲ್ಲೂರು, ಗೌರವಾನ್ವಿತ ಅಪರ ಹಿರಿಯ ಸಿವಿಲ್ ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಧೀಶರಾದ ರಮೇಶ್ ಬಾಬು ಬಿ.ಎನ್, ಗೌರವಾನ್ವಿತ ಪ್ರಧಾನ ಸಿವಿಲ್ ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಧೀಶರಾದ ಪ್ರಶಾಂತ ನಾಗಲಾಪುರ, ಗೌರವಾನ್ವಿತ ಅಪರ ಸಿವಿಲ್ ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಧೀಶರಾದ ಅಶೋಕ ಆರ್.ಹೆಚ್, ಗೌರವಾನ್ವಿತ 2ನೇ ಅಪರ ಸಿವಿಲ್ ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಧೀಶರಾದ ಸಂಜೀವಕುಮಾ.ಜಿ ಮತ್ತು 3ನೇ ಅಪರ ಸಿವಿಲ್ ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಧೀಶರಾದ ಚೈತ್ರ.ಜೆ ಅವರು ಲೋಕ ಅದಾಲತ್ ನಡೆಸಲಿದ್ದಾರೆ.
ಲೋಕ ಅದಾಲತ್‌ನಲ್ಲಿ ವಾಜ್ಯ ಪೂರ್ವ ಪ್ರಕರಣಗಳು ಮತ್ತು ಬ್ಯಾಂಕಿನ ಪ್ರಕರಣಗಳು, ಚೆಕ್ ಬೌನ್ಸ್, ಹಣ ವಸೂಲಿ, ಕಾರ್ಮಿಕರ ವಿವಾದ ಪ್ರಕರಣಗಳು, ಸಾರ್ವಜನಿಕ ಸೇವೆಗಳಾದ ವಿದ್ಯುತ್ ಬಿಲ್, ನೀರಿನ ಬಿಲ್ ಸೇರಿದಂತೆ ಭೂ ವಿವಾದ ಪ್ರಕರಣಗಳು, ವಿವಾಹ ಸಂಬAಧಿಸಿ ಪ್ರಕರಣಗಳು ಸೇರಿದಂತೆ ಇನ್ನಿತರ ಪ್ರಕರಣಗಳನ್ನು ಉಭಯ ಪಕ್ಷಗಾರರ ಕೋರಿಕೆಯ ಮೇರೆಗೆ ರಾಜೀ ಸಂಧಾನ ಮೂಲಕ ಇತ್ಯರ್ಥಗೊಳಿಸಲಾಗುವುದು.
ಈ ರಾಷ್ಟ್ರೀಯ ಲೋಕ ಅದಾಲತ್‌ನ ಸದುಪಯೋಗ ಪಡಿಸಿಕೊಂಡು ಕಕ್ಷಿದಾರರು ತಮ್ಮ ವಾಜ್ಯಗಳನ್ನು ಇತ್ಯರ್ಥಪಡಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗೆ ತಾಲೂಕು ಕಾನೂನು ಸೇವಾ ಸಮಿತಿಯ ಸಹಾಯಕ ಎಸ್.ಬಿ.ಕಮತಗಿ (ಮೊ:9480662155) ಅವರನ್ನು ಸಂಪರ್ಕಿಸಲು ಕೋರಲಾಗಿದೆ ಎಂದು ನ್ಯಾಯಾಧೀಶರಾದ ಪ್ರಶಾಂತ ನಾಗಲಾಪುರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.