
ಜು. 6 ರಂದು ಗ್ರಾಹಕರ ಕುಂದು ಕೊರತೆ ಸಭೆ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 2- ಜೆಸ್ಕಾಂ ಕೊಪ್ಪಳ ಕಾರ್ಯ ಮತ್ತು ಪಾಲನಾ ವೃತ್ತ ಕಚೇರಿ ವತಿಯಿಂದ ಕೊಪ್ಪಳ ಜಿಲ್ಲೆಯ ಇ.ಎಚ್.ಟಿ/ಹೆಚ್.ಟಿ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಜುಲೈ 06 ರಂದು ಬೆಳಿಗ್ಗೆ 11 ಗಂಟೆಗೆ ಕೊಪ್ಪಳದ ಕಾರ್ಯ ಮತ್ತು ಪಾಲನಾ ವೃತ್ತ ಕಛೇರಿಯಲ್ಲಿ ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆಯನ್ನು ಆಯೋಜಿಸಲಾಗಿದೆ.
ಸಭೆಯ ಅಧ್ಯಕ್ಷತೆಯನ್ನು ಕೊಪ್ಪಳ ಕಾರ್ಯ ಮತ್ತು ಪಾಲನಾ ವೃತ್ತ ಕಛೇರಿಯ ಅಧೀಕ್ಷಕ ಅಭಿಯಂತರರು(ವಿ). ವಹಿಸಿಕೊಳ್ಳುವರು. ಆದ್ದರಿಂದ ಕೊಪ್ಪಳ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಇ.ಎಚ್.ಟಿ/ಹೆಚ್.ಟಿ ವಿದ್ಯುತ್ ಗ್ರಾಹಕರು ನಿಗದಿತ ದಿನಾಂಕದಂದು ಸಭೆಗೆ ಹಾಜರಾಗಿ, ಸದುಪಯೋಗಪಡಿಸಿಕೊಳ್ಳಬೇಕು ಎಂದು ಅಧೀಕ್ಷಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.