IMG-20240119-WA0067

ಜೂನ್ ಅಂತ್ಯದವರೆಗೆ ಕುಡಿಯುವ ನೀರು: ಸಲಹಾ ಸಮಿತಿ ತೀರ್ಮಾನ

ಬೆಂಗಳೂರು, ಜ.19 – ವಿಜಯನಗರ ಕಾಲುವೆ ಒಳಗೊಂಡಂತೆ ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಿಗೆ ಜೂನ್ ಅಂತ್ಯದವರೆಗೆ ಕುಡಿಯುವ ನೀರು ಸೇರಿದಂತೆ ಬೆಳೆದು ನಿಂತ ಬೆಳೆಗಳಿಗೆ ನೀರು ಹರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರೂ ಅದ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರು ಶಿವರಾಜ್. ಎಸ್. ತಂಗಡಗಿ ಅವರು ಹೇಳಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ತುಂಗಭದ್ರಾ ನೀರಾವರಿ ಸಲಹಾ ಸಮಿತಿ ಸಭೆ ಬಳಿಕ ಸುದ್ದಿಗೋಷ್ಠಿಯನ್ನು‌ ಉದ್ದೇಶಿಸಿ ಮಾತನಾಡಿದ ಸಚಿವರು, ಜಲಾಶಯದ ನೀರಿನ ಸಾಮರ್ಥ್ಯ 10.151 ಟಿಎಂಸಿ, ಇದರಲ್ಲಿ ಡೆಟ್ ಸ್ಟೋರೆಜ್ 2 ಟಿಎಂಸಿ, ಈ ಪೈಕಿ ರಾಜ್ಯದ ಪಾಲು 2.481 ಟಿಎಂಸಿ, ಆಂಧ್ರಪ್ರದೇಶದ ಪಾಲು 2.851 ಡಿಎಂಸಿ ಇದೆ. ಈ ಹಿನ್ನೆಲೆಯಲ್ಲಿ ಜಲಾಶಯದಲ್ಲಿನ ನೀರಿನ‌ ಲಭ್ಯತೆ ಆಧಾರಿಸಿ ನಾಲ್ಕು ಜಿಲ್ಲೆಗಳಿಗೆ ಕುಡಿಯುವ ನೀರು ಹಂಚಿಕೆ ಮಾಡಲಾಗಿದೆ. ಅಲ್ಲದೆ,‌ ವಿಜಯನಗರ ಜಿಲ್ಲೆಯಲ್ಲಿ ಬಾಳೆ ಹಾಗೂ ಕಬ್ಬು ಬೆಳೆ ಬೆಳೆದು ನಿಂತಿದೆ.
ಅಭಿನಂದನೆಗಳುತುಂಗಭದ್ರಾ ಎಡದಂಡೆ ಮುಖ್ಯಕಾಲುವೆಗೆ 0.300 ಟಿಎಂಸಿ ನೀರನ್ನುಕುಡಿಯಲು ಸಲುವಾಗಿ ಕಾಯ್ದಿರಿಸಲಾದ 0.500 ಟಿಎಂಸಿ ನೀರಿನಲ್ಲಿ ಜ.22 ರಿಂದ ಏ.30ರ ತನಕ 50 ಕ್ಯೂಸೆಕ್ಸ್ ನಂತೆ (ಕುಡಿಯುವ ನೀರು ಒಳಗೊಂಡು) ಹಾಗೂ ರಾಯಚೂರು ಜಿಲ್ಲೆಗೆ ಹಂಚಿಕೆಯಾದ 1.200 ಟಿಎಂಸಿ ನೀರನ್ನು ಫೆ.15ರಿಂದ ಫೆ.25ರವರೆಗೆ, 0.600 ಟಿಎಂಸಿ ನೀರನ್ನು ಏ.10ರಿಂದ ಏ.20ರವರೆಗೆ 700 ಕ್ಯೂಸೆಕ್ಸ್ ನಂತೆ 0.600 ಟಿಎಂಸಿಯನ್ನು ಕುಡಿಯುವ ನೀರಿನ‌ ಸಲುವಾಗಿ ಹರಿಸಲಾಗುವುದು ಎಂದು ತಿಳಿಸಿದರು‌.

ಇನ್ನು ಜ.21ರಿಂದ ಜ.31ರವರೆಗೆ 100 ಕ್ಯೂಸೆಕ್ಸ್ ನಂತೆ ಮತ್ತು ಫೆಬ್ರವರಿ ಹಾಗೂ ಮಾರ್ಚ್ ನಲ್ಲಿ ತಿಂಗಳಿಗೆ 10 ದಿನಗಳಿಗೊಮ್ಮೆ 100 ಕ್ಯೂಸೆಕ್ಸ್ ನಂತೆ ಕುಡಿಯುವ ನೀರಿನ ಸಲುವಾಗಿ ಬಳ್ಳಾರಿ ನಗರ ಹಾಗೂ ಜಿಲ್ಲೆಯ ಇತರೆ ಕುಡಿಯುವ ನೀರಿನ ಯೋಜನೆಗೆ ಹಾಗೂ ಕೆರೆ ಕಟ್ಟೆಗಳನ್ನು ತುಂಬಿಸಲಾಗುವುದು ಎಂದರು.
ರಾಯ ಬಸವಣ್ಣ ಕಾಲುವೆಯಿಂದ ವಿಜಯನಗರ ಜಿಲ್ಲೆಗೆ ಹಂಚಿಕೆಯಾದ 0.500 ಟಿಎಂಸಿ ನೀರಿನಲ್ಲಿ ಜ.21ರಿಂದ ಜ.30ರವರೆಗೆ 100 ಕ್ಯೂಸೆಕ್ಸ್ ನಂತೆ ಆನ್/ಆಫ್ ನಂತೆ ನೀರು ಹರಿಸಲಾಗುವುದು ಎಂದು ಮಾಹಿತಿ ನೀಡಿದರು.

ಉಳಿದಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಂದ ನೀರಿಗೆ ಬೇಡಿಕೆ ಇಟ್ಟಂತೆ ಕುಡಿಯಲು ನೀರು ಹರಿಸಲಾಗುವುದು. ಎರಡನೇ ಬೆಳೆಗೆ ನೀರು ನೀಡಲು‌ ಸಾಧ್ಯವೇ ಇಲ್ಲ ಎಂಬುದನ್ನು ಹೇಳಲಾಗಿದೆ. ನಿಂತ ಬೆಳೆಗೆ ನೀರು ಬಿಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಹೂಳೇತ್ತುವ ವಿಚಾರದ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಹೂಳು ಎತ್ತಲು ಸಾಧ್ಯವಿಲ್ಲ ಎಂದು ಈ ಹಿಂದೆಯೇ ತಾಂತ್ರಿಕ ಸಮಿತಿ ವರದಿ ನೀಡಿದೆ. ಹಾಗಾಗಿ ಸಮಾನಾಂತರ ಜಲಾಶಯ ನಿರ್ಮಿಸಬೇಕು ಎಂಬುದು ನಮ್ಮ ಬೇಡಿಕೆ ಕೂಡ. ಇದಕ್ಕೆ ನೆರೆಯ ಆಂಧ್ರ ಪ್ರದೇಶ ಹಾಗೂ ತೆಲಂಗಾಣ ರಾಜ್ಯ ಕೂಡ ಒಪ್ಪಿಗೆ ನೀಡಬೇಕು. ಹಿಂದಿನ ಬಿಜೆಪಿ ಸರ್ಕಾರ ಬಜೆಟ್ ನಲ್ಲಿ‌ ಸಮಾನಾಂತರ ಜಲಾಶಯ ನಿರ್ಮಾಣಕ್ಕೆಂದು 1000 ಘೋಷಿಸಿ, ಮೂಗಿಗೆ ತುಪ್ಪ ಹಚ್ಚುವ ಕೆಲಸ ಮಾಡಿದೆ. ಆದರೆ ಹಣ ಇಟ್ಟರೆ ಸಾಲದು ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ನೀರಾವರಿ ಮಂತ್ರಿಗಳು ಕೂತು ಚರ್ಚಿಸಿ ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ಸಮಾನಾಂತರ ಜಲಾಶಯ ನಿರ್ಮಾಣ ಮಾಡುವ ವಿಚಾರದ ಬಗ್ಗೆ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳ ಗಮನ ಸೆಳೆಯಲಾಗುವುದು ಎಂದರು.

ಈ ಸಂದರ್ಭದಲ್ಲಿ ಸಚಿವರಾದ ಜಮೀರ್ ಅಹ್ಮದ್ ಖಾನ್, ಬೋಸ್ ರಾಜ್, ಶಾಸಕರಾದ ರಾಘವೇಂದ್ರ ಹಿಟ್ನಾಳ್, ಎಚ್.ಆರ್.ಗವಿಯಪ್ಪ, ಜಿ.ಜನಾರ್ದನ ರೆಡ್ಡಿ ಹಾಗೂ ರೈತ ಮುಖಂಡರು ಇನ್ನಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!