2c136fae-be38-4577-97e1-318669006cc9

ಜೂನ್ 14 ರಂದು ವಾಕ್ ಇನ್ ಇಂಟರ್‌ವ್ಯೂವ್

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 11- ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಜೂನ್ 14 ರಂದು ವಾಕ್ ಇನ್ ಇಂಟರ್‌ವ್ಯೂವ್ ನಡೆಯಲಿದೆ.

ಖಾಸಗಿ ಸಂಸ್ಥೆಗಳು ತಮ್ಮಲ್ಲಿನ ಖಾಲಿ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದು, ಜೂ.14 ರಂದು ಬೆಳಿಗ್ಗೆ 10 ಗಂಟೆಯಿAದ ಮಧ್ಯಾಹ್ನ 01.30 ಗಂಟೆಯವರೆಗೆ ವಾಕ್ ಇನ್ ಇಂಟರ್‌ವ್ಯೂವ್ ನಡೆಯಲಿದೆ. ಎಲ್ಲರಿಗೂ ಉಚಿತ ಪ್ರವೇಶವಿರುತ್ತದೆ.

ಪಿಯುಸಿ/ತತ್ಸಮಾನ, ಐಟಿಐ, ಡಿಪ್ಲೊಮಾ ಹಾಗೂ ಬಿ.ಎ, ಬಿ.ಕಾಂ(ಟ್ಯಾಲಿ ಕಲಿತವರಿಗೆ ಆದ್ಯತೆ) ವಿದ್ಯಾರ್ಹತೆ ಹೊಂದಿದ, 18 ರಿಂದ 28 ವರ್ಷದ ಅಭ್ಯರ್ಥಿಗಳು ವಾಕ್ ಇನ್ ಇಂಟರ್‌ವ್ಯೂವ್ ನಲ್ಲಿ ಭಾಗವಹಿಸಬಹುದು. ಆಸಕ್ತ ಯುವಕ/ಯುವತಿಯರು ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳು ಮತ್ತು ಆಧಾರ್ ಕಾಡ್ ಪ್ರತಿ, ಬಯೋಡೆಟಾ ಹಾಗೂ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಇಂಟರ್‌ವ್ಯೂವ್‌ನಲ್ಲಿ ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಕಚೇರಿಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!