ಜೂ.18 ರಂದು ಕೊಪ್ಪಳ ತಾ.ಪಂ. ಕೆ.ಡಿ.ಪಿ ಸಭೆ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 13- ಕೊಪ್ಪಳ ತಾಲ್ಲೂಕು ಪಂಚಾಯತಿಯ ಪ್ರಥಮ ತ್ರೆöÊಮಾಸಿಕ ಕೆ.ಡಿ.ಪಿ ಸಭೆಯನ್ನು ಜೂನ್ 18 ರಂದು ಬೆಳಿಗ್ಗೆ 09 ಗಂಟೆಗೆ ತಾಲ್ಲೂಕು ಪಂಚಾಯತಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಭೆಯ ಅಧ್ಯಕ್ಷತೆಯನ್ನು ಕೊಪ್ಪಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ವಹಿಸಿಕೊಳ್ಳಲಿದ್ದು, ತಾಲ್ಲೂಕು ಮಟ್ಟದ ಎಲ್ಲ ಅನುಷ್ಠಾನಾಧಿಕಾರಿಗಳು 2024-25ನೇ ಸಾಲಿನ ಪ್ರಥಮ ತ್ರೆöÊಮಾಸಿಕ ಕೆ.ಡಿ.ಪಿ ಸಭೆಗೆ ಮೇ 2024ರ ಅಂತ್ಯದವರೆಗಿನ ಪ್ರಗತಿ ವರದಿಯೊಂದಿಗೆ ಖುದ್ದಾಗಿ ಹಾಜರಾಗಬೇಕು ಎಂದು ತಾಲ್ಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ದುಂಡಪ್ಪ ತುರಾದಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
