
ಜೆಡಿಎಸ್ ಸಹ ನಾಯಕರಾಗಿ ಮಹಾಂತಯ್ಯನಮಠ ಆಯ್ಕೆ
ಕರುನಾಡ ಬೆಳಗು ಸುದ್ದಿ
ಕೊಪ್ಪಳ,31- ಲೋಕಸಭೆ ಚುನಾವಣೆ ಹಿನ್ನಲೆ ಜೆಡಿಎಸ್ ರಾಜ್ಯ ಕಾರ್ಯದರ್ಶಿ ವೀರೇಶ ಮಹಾಂತಯ್ಯನಮಠ ಅವರನ್ನು ಕೊಪ್ಪಳ ಲೋಕಸಭಾ ಕ್ಷೇತ್ರದ ಸಹ ನಾಯಕರನ್ನಾಗಿ ಆಯ್ಕೆ ಮಾಡಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಆದೇಶಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿದ್ದು ತಾಲೂಕು ಮತ್ತು ಜಿಲ್ಲಾ ಘಟಕಗಳನ್ನು ಸಂಘಟಿಸಿ, ಬಲವರ್ಧನೆಗೊಳಿಸಲು ಮತ್ತು ಚುನಾವಣೆಯ ಪೂರ್ವಸಿದ್ದತೆಗಳನ್ನು ಕೈಗೊಳ್ಳಲು ಹಾಗೂ ಬಿಜೆಪಿಯೊಂದಿಗೆ ಹೊಂದಾಣಿಕೆ ಮತ್ತು ಸಮನ್ವಯ ಸಾಧಿಸುವಂತೆ ತಿಳಿಸಿದ್ದಾರೆ.