ಡಿ.26ರಂದು ವಿಜಯನಗರಕ್ಕೆ
ಕಂದಾಯ ಸಚಿವ ಕೃಷ್ಣಾ ಬೇರೆಗೌಡ
ಕರುನಾಡ ಬೆಳಗು ಸುದ್ದಿ
ಹೊಸಪೇಟೆ(ವಿಜಯನಗರ),ಡಿ.೨೫- ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಡಿ.26ರಂದು ವಿಜಯನಗರ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಡಿ.26ರಂದು ಮಧ್ಯಾಹ್ನ 1 ಗಂಟೆಗೆ ಹೊಸಪೇಟೆಗೆ ಆಗಮಿಸಿ, 1.30 ರಿಂದ ಸಂಜೆ 6 ಗಂಟೆಯವರೆಗೆ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ವಿಜಯನಗರ ಜಿಲ್ಲೆಯ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಬಳಿಕ 6.30ಕ್ಕೆ ಬೆಂಗಳೂರಿಗೆ ಪ್ರಯಾಣ ಬೆಳಸುವರು ಎಂದು ತಿಳಿಸಿದ್ದಾರೆ.