
ಡೆಂಗಿ ಜ್ವರ : ಸೊಳ್ಳೆ ಉತ್ಪತ್ತಿ ತಾಣ ನಾಶಪಡಿಸುವ ಅಭಿಯಾನಕ್ಕೆ ಚಾಲನೆ
ಕರುನಾಡ ಬೆಳಗು ಸುದ್ದಿ
ವಿಜಯನಗರ, 28- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಸಂಯುಕ್ತಾಶ್ರಯದಲ್ಲಿ ಪ್ರತಿ ಶುಕ್ರವಾರ ಈಡಿಸ್ ಇಜಿಪ್ಟೆöÊ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶ ಪಡಿಸುವ ಅಭಿಯಾನಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿಗಳಾದ ಸದಾಶಿವ ಪ್ರಭು.ಬಿ ಅವರು ಹಸಿರು ನಿಶಾನೆ ತೋರಿದರು.
ನಗರದ 100 ಹಾಸಿಗೆಯ ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಜೂನ್ 28ರಂದು ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರತಿ ಶುಕ್ರವಾರ ಈಡಿಸ್ ಇಜಿಪ್ಟೆöÊ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಪಡಿಸುವ ಅಭಿಯಾನಕ್ಕೆ ರಾಜ್ಯಾದ್ಯಂತ ಏಕಕಾಲದಲ್ಲಿ ಚಾಲನೆ ಸಿಕ್ಕಿದೆ. ಇದರ ಭಾಗವಾಗಿ ವಿಜಯನಗರ ಜಿಲ್ಲೆಯಲ್ಲಿಯು ಸಹ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಜಿಲ್ಲೆಯ ಎಲ್ಲಾ ಇಲಾಖೆಗಳ ಅಧಿಕಾರಿಗಳು, ನಗರಸಭೆ, ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯತಿಗಳ ಅಧಿಕಾರಿಗಳಿಗೆ ಈ ಕಾರ್ಯಕ್ರಮದ ಬಗ್ಗೆ ಈಗಾಗಲೇ ಅರಿವು ಮೂಡಿಸಲಾಗಿದೆ. ಈ ಕಾರ್ಯಕ್ರಮದ ಮುಖಾಂತರÀ ಮನೆಮನೆಗೆ ತೆರಳಿ ಡೆಂಗೆ ಮತ್ತು ಅದರ ಉತ್ಪತ್ತಿ ತಾಣಗಳನ್ನು ನಾಶಪಡಿಸುವ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಗುವುದು ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಶಂಕರ ನಾಯ್ಕ್ ಅವರು ಮಾತನಾಡಿ, ಈ ಮೊದಲು ತಿಂಗಳಲ್ಲಿ ಮೊದಲನೆಯ ವಾರದ ಒಂದು ದಿನ ಮತ್ತು ಕೊನೆಯ ವಾರದ ಒಂದು ದಿನ ಶುಕ್ರವಾರದಂದು ಈ ಕಾರ್ಯಕ್ರಮ ಮಾಡಲಾಗುತಿತ್ತು. ಈಗ ರಾಜ್ಯ ಸರ್ಕಾರದ ಆದೇಶದಂತೆ ವಾರದ ಪ್ರತಿ ಶುಕ್ರವಾರ ಮನೆಮನೆಗೆ ತೆರಳಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಗುವುದು. ಮಳೆಗಾಲ ಇರುವುದರಿಂದ ನಿಂತ ನೀರಿನಲ್ಲಿ ಈಡಿಸ್ ಇಜಿಪ್ಟೆöÊ ಸೊಳ್ಳೆಯ ಲಾರ್ವ ಉತ್ಪತ್ತಿಯಾಗುತ್ತದೆ. ಸಾರ್ವಜನಿಕರು ಮನೆಯಲ್ಲಿ ಹೆಚ್ಚು ದಿನಗಳ ಕಾಲ ನೀರನ್ನು ಶೇಖರಣೆ ಮಾಡದೇ ಹಾಗೂ ಮನೆಯ ಅಕ್ಕ ಪಕ್ಕ ಜಾಗದಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಈ ಅಭಿಯಾನಕ್ಕೆ ಸಾರ್ವಜನಿಕರು ಸಹಕರಿಬೇಕು ಎಂದು ಮನವಿ ಮಾಡಿದರು.
ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣಾಧಿಕಾರಿ ಕಮಲಮ್ಮ ಅವರು ಮಾತನಾಡಿ, ಡೆಂಗಿ ಜ್ವರ ನಿಯಂತ್ರಣ ನಮ್ಮೆಲ್ಲರ ಜವಾಬ್ದಾರಿ. ಬಳಸಿ ಎಸೆಯುವ ಟೀಕಪ್, ಪ್ಲಾಸ್ಟಿಕ್ ಬಾಟಲ್, ಡಬ್ಬಗಳು ನಿರುಪಯುಕ್ತ ವಸ್ತುಗಳಲ್ಲಿ ನೀರು ಸಂಗ್ರಹವಾಗುವುದರಿAದ ಈಡಿಸ್ ಇಜಿಪ್ಟೆöÊ ಸೊಳ್ಳೆಯ ಲಾರ್ವಗಳು ಬೆಳೆಯುತ್ತವೆ. ನಮ್ಮ ಸಣ್ಣ ನಿರ್ಲಕ್ಷö್ಯವೂ ಕೂಡ ಡೆಂಗಿ ಜ್ವರದಿಂದ ನರಳುವಂತೆ ಮಾಡಬಹುದು. ಮನೆಯ ಸುತ್ತ್ತಲಿನ ಪರಿಸರವನ್ನು ಸೊಳ್ಳೆ ಉತ್ಪತ್ತಿ ತಾಣಗಳಿಂದ ಮುಕ್ತಗೊಳಿಸೋಣ ಎಂದರು.
ತುAಗಭದ್ರ ಸ್ಕೂಲ್ ಆಫ್ ನರ್ಸಿಂಗ್, ಮಲ್ಲಿಗೆ ಪ್ಯಾರಾ ಮೆಡಿಕಲ್, ದಿಪಾಲಿ ಸ್ಕೂಲ್ ಆಫ್ ಪ್ಯಾರಾಮೆಡಿಕಲ್ ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಸೇರಿದಂತೆ ಬೇರೆ ಬೇರೆ ಗುಂಪುಗಳಿAದ ಮನೆಮನೆಗೆ ತೆರಳಿ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಆರ್.ಸಿ.ಹೆಚ್ ಅಧಿಕಾರಿ ಡಾ.ಜಂಬಯ್ಯ ಜಿಲ್ಲಾ ಸರ್ವೇಕ್ಷಣಾಧಿಕಾರಿ ಷಣ್ಮುಖ ನಾಯಕ್, ಜಿಲ್ಲಾ ಅರೋಗ್ಯ ಶಿಕ್ಷಣಾಧಿಕಾರಿ ಎಂ.ಪಿ. ದೊಡ್ಡಮನಿ, ತಾಲೂಕು ಅರೋಗ್ಯ ಅಧಿಕಾರಿ ಡಾ. ಭಾಸ್ಕರ್, ಆರೋಗ್ಯ ನಿರೀಕ್ಷಣಾಧಿಕಾರಿ ಧರ್ಮನಗೌಡ ಸೇರಿದಂತೆ ಅರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.