WhatsApp Image 2024-06-27 at 4.43.42 PM

ಡೆಂಗ್ಯೂ ವಿರೋಧಿ ದಿನ ಸೊಳ್ಳೆಗಳಿಗೆ ಕಡಿವಾಣ ಹಾಕಿ : ಡಾ.ಬಿ.ಈರಣ್ಣ

ಕರುನಾಡ ಬೆಳಗು ಸುದ್ದಿ

ಸಿರುಗುಪ್ಪ, ನಗರದ ತಾಲೂಕು ಆರೋಗ್ಯ ಅಧಿಕಾರಿಗಳ ಸಭಾಂಗಣದಲ್ಲಿ ರಾಷ್ಟ್ರೀಯ ಡೆಂಗ್ಯೂ ವಿರೋಧಿ ದಿನದ ಅಂಗವಾಗಿ ಪ್ರೌಢಶಾಲಾ ವಿಜ್ಞಾನ ಶಿಕ್ಷಕರಿಗೆ ಜಾಗೃತಿ ಶಿಬಿರವನ್ನು ಏರ್ಪಡಿಸಲಾಗಿತ್ತು.

ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಕೀಟ ಶಾಸ್ತ್ರಜ್ಞೆ ಶ್ರೀಮತಿ ನಂದಾ ಕಡಿ ಯವರು ಪ್ರಾರ್ಥನ ವೇಳೆಯಲ್ಲಿ ಮಕ್ಕಳಿಗೆ ಡೆಂಗ್ಯೂ ಜ್ವರದ ಬಗ್ಗೆ ಜಾಗೃತಿ ಮೂಡಿಸಿ ಸಮುದಾಯವನ್ನು ರಕ್ಷಿಸಿ. ಈ ನಿಟ್ಟಿನಲ್ಲಿ ಶಿಕ್ಷಕರ ಪಾತ್ರ ಹಿರಿದಾಗಿದೆ ಎಂದು ತಿಳಿಸಿದರು.

ಸೊಳ್ಳೆಗಳ ಜೀವನ ಚಕ್ರ ಸಂತಾನೋತ್ಪತ್ತಿ ತಾಣಗಳು ಮತ್ತು ನಿವಾರಣೋಪಾಯಗಳ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ತಾಲೂಕು ಆರೋಗ್ಯ ಅಧಿಕಾರಿ ಡಾಕ್ಟರ್ ಈರಣ್ಣ ಮಾತನಾಡಿ ಪರಿಸರ ಸ್ವಚ್ಛತೆಯಿಂದ ಸೊಳ್ಳೆಗಳಿಗೆ ಕಡಿವಾಣ ಹಾಕಬಹುದು ಎಂದು ಅಭಿಪ್ರಾಯಪಟ್ಟರು.

ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಮೊಹಮ್ಮದ್ ಖಾಸಿಂ ರವರು ಸೊಳ್ಳೆಗಳಿಂದ ಹರಡುವ ಮಾರಕ ರೋಗಗಳು ಕುರಿತಂತೆ ಆರೋಗ್ಯ ಶಿಕ್ಷಣ ನೀಡಿದರು.

ಮಲೇರಿಯಾ ಮೇಲ್ವಿಚಾರಕ ಶ್ರೀನಿವಾಸರವರು ಮುಂಜಾಗ್ರತಾ ಕ್ರಮ, ರಕ್ಷಣಾ ಕ್ರಮ ಕುರಿತು ವಿವರಣೆ ನೀಡಿದರು.

ಶಿಬಿರದಲ್ಲಿ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಭೀಮರಾಜ್ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ಸದಸ್ಯರು ಸಾಕ್ಷರತಾ ಅಬ್ದುಲ್ ನಬಿ ಹಾಗೂ ಎಲ್ಲಾ ಶಾಲೆಗಳ ವಿಜ್ಞಾನ ಶಿಕ್ಷಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!