ನರೇಗಾ ಕಾಮಗಾರಿ ಸ್ಥಳದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

ತಪ್ಪದೇ ಮತ ಚಲಾಯಿಸಿ ಪ್ರಜಾಪ್ರಭುತ್ವ ಗೆಲ್ಲಿಸಿ‌ : ವೈ.ವನಜಾ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 6-  ಮೇ. 07 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬರೂ ತಪ್ಪದೇ ಮತ ಚಲಾಯಿಸಿ ಪ್ರಜಾಪ್ರಭುತ್ವ ಗೆಲ್ಲಿಸಿ ಎಂದು ಕಾರಟಗಿ ತಾ.ಪಂ ಸಹಾಯಕ ನಿರ್ದೇಶಕರಾದ ವೈ.ವನಜಾ ಅವರು ಹೇಳಿದರು.

ತಾಲೂಕಿನ ಬೆನ್ನೂರು ಗ್ರಾಮ ಪಂಚಾಯತಿ ಕೂಲಿಕಾರರಿಗೆ ನರೇಗಾದಡಿ ಜಿನುಗು ಕೆರೆ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಆಯೋಜಿಸಲಾದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟçವಾಗಿದೆ. ಇಲ್ಲಿ 18 ವರ್ಷ ತುಂಬಿದ ಎಲ್ಲರಿಗೂ ಮತದಾನದ ಹಕ್ಕಿದೆ. ದೇಶದ ಭವಿಷ್ಯಕ್ಕಾಗಿ ನಿಮ್ಮದೊಂದು ಮತ ಅತ್ಯಅಮೂಲ್ಯವಾದದ್ದು, ದೇಶದ ಸುಭದ್ರ ಭವಿಷ್ಯಕ್ಕಾಗಿ ಪ್ರತಿಯೊಬ್ಬರ ಮತ ಅತ್ಯಮೂಲ್ಯವಾದದ್ದು, ಮತದಾರರು ಯಾವುದೇ ಆಸೆ, ಆಮೀಷಕ್ಕೆ ಒಳಗಾಗದೆ ಕಡ್ಡಾಯವಾಗಿ ಮತದಾನ ಮಾಡಿ ಎಂದರು.

ನAತರ ನರೇಗಾ ಯೋಜನೆಯಡಿ ವಲಸೆ ಯಾಕ್ರೀ ನಿಮ್ಮೂರಲ್ಲೇ ಉದ್ಯೋಗ ಖಾತ್ರಿ ಅಭಿಯಾನ ಈಗಾಗಲೇ ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ಪ್ರಾರಂಭವಾಗಿದ್ದು, ಗ್ರಾಮ ಪಂಚಾಯತಿಗೆ ನಮೂನೆ-6 ಬೇಡಿಕೆ ಸಲ್ಲಿಸಿ ಕೆಲಸ ಪಡೆಯಿರಿ. ನರೇಗಾ ಕೂಲಿ ಮೊತ್ತವು 316 ರಿಂದ 349 ರೂ. ಹೆಚ್ಚಳವಾಗಿದೆ. ಬೇಸಿಗೆ ಇರುವುದರಿಂದ ಕೆಲಸದಲ್ಲಿ ಶೇ.30 ರಿಯಾಯಿತಿ ಸಹ ಇದೆ ಎಂದರು.

ನರೇಗಾ ಕೂಲಿಕಾರರಿಗೆ ಮತದಾನದ ಕುರಿತು ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು. ಈ ವೇಳೆ ತಾಲೂಕು ಪಂಚಾಯತ್ ತಾಂತ್ರಿಕ ಸಂಯೋಜಕರು, ಐಇಸಿ ಸಂಯೋಜಕರು, ಗ್ರಾ.ಪಂ ಕಾರ್ಯದರ್ಶಿಗಳು, ತಾಂತ್ರಿಕ ಸಹಾಯಕರು, ಸೇರಿ ಗ್ರಾ.ಪಂ ಸಿಬ್ಬಂದಿಗಳು ಇದ್ದರು.

Leave a Reply

Your email address will not be published. Required fields are marked *

error: Content is protected !!