
ತಳಕಲ್ ಎಂಡಿಆರ್‌ಎಸ್ ವಸತಿ ಶಾಲೆ : ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 5- ಕುಕನೂರು ತಾಲ್ಲೂಕಿನ ತಳಕಲ್‌ನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ/ಕಾಲೇಜಿನಲ್ಲಿ(ಆಂಗ್ಲ ಮಾಧ್ಯಮ) ಪ್ರಸ್ತುತ ಶೈಕ್ಷಣಿಕ ಸಾಲಿನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅತಿಥಿ (ಗೌರವ) ಶಿಕ್ಷಕರ ನೇಮಕಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ವಸತಿ ಶಾಲೆಯು 06 ನೇ ತರಗತಿಯಿಂದ 12ನೇ ತರಗತಿ ವರೆಗೆ ಕಾರ್ಯನಿರ್ವಹಿಸುತ್ತಿದ್ದು, ಬೋಧನಾ ವಿಷಯ ಕನ್ನಡ, ಇಂಗ್ಲೀಷ್‌ಗೆ ಎಂ.ಎ. ಬಿ.ಎಡ್, ಗಣಿತ, ಭೌತಶಾಸ್ತç, ರಸಾಯನ ಶಾಸ್ತç, ಜೀವಶಾಸ್ತç ವಿಷಯಗಳಿಗೆ ಎಂ.ಎಸ್‌ಸಿ,ಬಿ.ಎಡ್, ಸಮಾಜ ವಿಜ್ಞಾನ ವಿಷಯಕ್ಕೆ ಬಿ.ಎ.ಬಿ.ಎಡ್. ಹಾಗೂ ಸಾಮಾನ್ಯ ವಿಜ್ಞಾನ ವಿಷಯಕ್ಕೆ ಬಿ.ಎಸ್‌ಸಿ.ಬಿ.ಎಡ್. ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಜೂನ್ 10 ರೊಳಗಾಗಿ ಪ್ರಾಂಶುಪಾಲರು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ತಳಕಲ್ ಇಲ್ಲಿಗೆ ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದು ಎಂದು ವಸತಿ ಶಾಲೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.