
ತಾಲೂಕ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ
ಕರುನಾಡ ಬೆಳಗು ಸುದ್ದಿ
ಕೊಪ್ಪಳ,16- ತಾ.ಪಂಯಲ್ಲಿ ಜರುಗಿದ ಪ್ರಥಮ ಸಭೆ ರಾಜ್ಯ ಸರ್ಕಾರ ಜಾರಿಗೆ ತಂದಿರುವ 05 ಗ್ಯಾರಂಟಿಗಳು ಸಮರ್ಪಕವಾಗಿ ಅನುಷ್ಠಾನಿಸಲು ಕೊಪ್ಪಳ ತಾಲೂಕ ಮಟ್ಟದ ಅನುಷ್ಠಾನ ಸಮಿತಿಯ ಪ್ರಥಮ ಸಭೆಯು ಶ್ರೀ.ಬಾಲಚಂದ್ರನ್ ಎಸ್ ರವರ ಅಧ್ಯಕ್ಷತೆಯಲ್ಲಿ ದಿನಾಂಕ:16-03-2024ರಂದು ಕೊಪ್ಪಳ ತಾಲೂಕ ಪಂಚಾಯತಿಯಲ್ಲಿ ಜರುಗಿತು.
ಗೃಹಲಕ್ಷ್ಮೀ ಯೋಜನೆಯ ಕುರಿತು ತಾಂತ್ರಿಕ ಸಮಸ್ಯೆಯಿಂದ ಕೆಲವು ಫಲಾನುಭವಿಗಳಿಗೆ ಹಣ ಜಮೆಯಾಗಿರುವದಿಲ್ಲ. ಕೂಡಲೇ ಸರಿಪಡಿಸಲು ಮೇಲಾಧಿಕಾರಿಗಳಿಗೆ ಮಾಹಿತಿ ಸಲ್ಲಿಸಲು ಅಧ್ಯಕ್ಷರು ಸಿಡಿಪಿಒರವರಿಗೆ ಸೂಚಿಸಿದರು.
ಗೃಹಜ್ಯೋತಿ, ಶಕ್ತಿ ಯೋಜನೆ, ಯುವ ನಿಧಿ, ಅನ್ನಭಾಗ್ಯ ಯೋಜನೆಗಳ ಕುರಿತು ತಾಲೂಕ ಮಟ್ಟದ ಅಧಿಕಾರಿಗಳು ವರದಿ ಮಂಡಿಸಿದರು.
5 ಗ್ಯಾರಂಟಿ ಯೋಜನೆಗಳ ಪ್ರತಿ ಫಲಾನುಭವಿಗೆ ತಲುಪುವಂತೆ ಸಭೆಯ ಅಧ್ಯಕ್ಷರು ಹಾಜರಿದ್ದ ಎಲ್ಲಾ ಸದಸ್ಯರು, ಅನುಷ್ಠಾನ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ತಾಲೂಕ ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ತುರಾದಿ, ತಹಶೀಲ್ದಾರ ವಿಠ್ಠಲ್ ಚೌಗಲಾ, ಸಮಿತಿಯ ಸರ್ವ ಸದಸ್ಯರು, 5 ಗ್ಯಾರಂಟಿ ಯೋಜನೆಗಳ ಅನುಷ್ಠಾನ ಅಧಿಕಾರಿಗಳು ಹಾಜರಿದ್ದರು.