
ತೋಟಗಾರಿಕಾ ಯೋಜನೆಗಳಿಗೆ ರೈತರಿಂದ ಅರ್ಜಿ ಆಹ್ವಾನ
ಕರುನಾಡ ಬೆಳಗು ಸುದ್ದಿ
ವಿಜಯನಗರ, 29- ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ತೋಟಗಾರಿಕೆ ಇಲಾಖಾ ಕಚೇರಿಯಿಂದ 2024-25ನೇ ಸಾಲಿನಲ್ಲಿ ಅನುಷ್ಠಾನಗೊಳಿಸುವ ಯೋಜನೆಗಳಿಗೆ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ರಾಷ್ಟ್ರೀಯ ತೋಟಗಾರಿಕೆ ಮಿಷನ್, ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ (ಹನಿ ನೀರಾವರಿ) ಯೋಜನೆ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಯಾಂತ್ರೀಕರಣ ಯೋಜನೆ ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗಳಿಗೆ ರೈತ ಭಾಂದವರು ಅರ್ಜಿ ಸಲ್ಲಿಸಬಹುದಾಗಿದೆ. ಖಾಯಂ ನೀರಾವರಿ ಸೌಲಭ್ಯವಿರುವ ಹಾಗೂ ತೋಟಗಾರಿಕೆ ಬೆಳೆ ಹೊಂದಿರುವ ಮತ್ತು ಬೆಳೆಯಲು ಆಸಕ್ತಿ ಹೊಂದಿರುವ ರೈತರು 2024 ಜೂನ್ 25ರೊಳಗಾಗಿ ಅಗತ್ಯ ದಾಖಲಾತಿಯೊಂದಿಗೆ ತೋಟಗಾರಿಕೆ ಇಲಾಖೆ ಕಚೇರಿಗೆ ಅರ್ಜಿ ಸಲ್ಲಿಸಲು ರೈತ ಭಾಂದವರಲ್ಲಿ ವಿನಂತಿಸಿದೆ.
ಹೆಚ್ಚಿನ ಮಾಹಿತಿಗಾಗಿ ಹೂವಿನಹಡಗಲಿಯ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳು ಹಾಗೂ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರನ್ನು ಸಂಪರ್ಕಿಸಲು ಕೋರಿದೆ ಎಂದು ಹೂವಿನಹಡಗಲಿಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.