ವಿಶ್ವ ತಂಬಾಕು ರಹಿತ ದಿನಾಚರಣೆ (1)

ದುಶ್ಚಟಗಳಿಂದ ಯುವಜನರನ್ನು ರಕ್ಷಿಸುವುದು ಎಲ್ಲರ ಜವಾಬ್ದಾರಿ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 1- ತಂಬಾಕು ಸೆವನೆಯಂತಹ ದುಶ್ಚಟಗಳಿಂದ ಯುವಜನತೆಯನ್ನು ರಕ್ಷಿಸುವುದು, ಅವರ ಆರೋಗ್ಯ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ಹಿರಿಯ ಸಿವ್ಹಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯಕಾರ್ಯದರ್ಶಿಗಳಾದ ಮಲಕಾರಿ ರಾಮಪ್ಪ ಒಡೆಯರ್ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ವಕೀಲರ ಸಂಘ ಕೊಪ್ಪಳ, ಜಿಲ್ಲಾ ಸರ್ವೇಕ್ಷಣಾ ಘಟಕ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಕೊಪ್ಪಳ ಹಾಗೂ ಬ್ರಹ್ಮಕುಮಾರಿ ಯೋಗಿನಿ ಅಕ್ಕ, ಸಂಚಾಲಕರು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯ, ಕೊಪ್ಪಳ ಇವರ ಸಂಯುಕ್ತ ಆಶ್ರಯದಲ್ಲಿ ಮೇ 31 ರಂದು ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ನಗರದ ಹಳೇ ಜಿಲ್ಲಾಸ್ಪತ್ರೆ ಆವರಣದಲ್ಲಿ ಆಯೋಜಿಸಿದ್ದ ಜನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರತಿ ವರ್ಷದಂತೆ ತಂಬಾಕು ಉದ್ಯಮದ ಹಸ್ತಕ್ಷೇಪದಿಂದ ಮಕ್ಕಳನ್ನು ರಕ್ಷಿಸುವುದು ಎಂಬ ಘೋಷವಾಕ್ಯದೊಂದಿಗೆ ಈ ವರ್ಷ ವಿಶ್ವ ತಂಬಾಕು ರಹಿತ ದಿನವನ್ನು ಆಚರಣೆ ಮಾಡಲಾಗುತ್ತಿದೆ. ತಂಬಾಕನ್ನು ಯಾವುದೇ ಪ್ರಾಣಿ ಪಕ್ಷಿಗಳು ತಿನ್ನುವುದಿಲ್ಲ. ಆದರೆ ವಿಪರ್ಯಾಸವೆಂದರೆ ಎಲ್ಲರಿಗಿಂತಲೂ ಬುದ್ದಿ ಶಾಲಿಯಾದ ಮನುಷ್ಯ ಪ್ರಾಣಿ ಇಂದು ತಂಬಾಕಿನ ದುಷ್ಚಟಕ್ಕೆ ಬಲಿಯಾಗುತ್ತಿದ್ದಾನೆ. ಇತ್ತೀಜಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ತಂಬಾಕು ಸೇವನೆ ದುಷ್ಚಟಕ್ಕೆ ಒಳಗಾಗುತ್ತಿದ್ದಾರೆ. ಇದರಿಂದ ಅವರ ಆರೋಗ್ಯ ಮತ್ತು ಸಮಾಜದ ಮೇಲೆ ಬಹಳಷ್ಟು ದುಷ್ಪರಿಣಾಮಗಳು ಬೀರುತ್ತವೆ ಹಾಗೂ ತಂಬಾಕು ಸೇವನೆಯಿಂದ ಮನುಷ್ಯನ ದೇಹದಲ್ಲಿ ಅಂಗಾAಗ ವೈಕಲ್ಯ ಉಂಟಾಗುತ್ತದೆ ಮತ್ತು ದೇಶದ ಆರ್ಥಿಕ ಅಭಿವೃದ್ದಿಯಲ್ಲಿ ಕುಂಠಿತಗೊಳ್ಳುತ್ತದೆ. ದುಶ್ಚಟಕ್ಕೆ ಬಲಿಯಾಗದಂತೆ ಯುವ ಜನತೆಯ ಆರೋಗ್ಯ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡಿದರೆ ಕೋಟ್ಪಾ-2003 ರ ಕಾಯ್ದೆಯ ಪ್ರಕಾರ ದಂಡ ಮತ್ತು ಶಿಕ್ಷೆ ವಿಧಿಸಲಾಗುತ್ತದೆ. ಆದ್ದರಿಂದ ಎಲ್ಲರೂ ಒಳ್ಳೆಯ ಆರೋಗ್ಯಕರ ಅಭ್ಯಾಸಗಳನ್ನು ರೂಢಿಸಿಕೊಂಡು ತಮ್ಮ ಆರೋಗ್ಯವನ್ನು ಕಾಪಾಡಿಕೊಂಡು ಉತ್ತಮ ಸಮಾಜ ನಿರ್ಮಾಣ ಮಾಡೋಣ ಎಂದು ಅವರು ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಲಿಂಗರಾಜು ಟಿ. ಅವರು ಮಾತನಾಡಿ, ಪ್ರತಿ ವರ್ಷದಂತೆ ಈ ವರ್ಷವೂ ಮೇ 31 ರಂದು ವಿಶ್ವ ತಂಬಾಕು ರಹಿತ ದಿನಾಚರಣೆ ಕಾರ್ಯಕ್ರಮ ಆಚರಿಸಲಾಗುತ್ತಿದೆ. ಈ ವರ್ಷ ತಂಬಾಕು ಉದ್ಯಮದ ಹಸ್ತಕ್ಷೇಪದಿಂದ ಮಕ್ಕಳನ್ನು ರಕ್ಷಿಸುವುದು ಎಂಬ ಘೋಷವಾಕ್ಯದೊಂದಿಗೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮದ ಉದ್ದೇಶ ತಂಬಾಕು ಸೇವನೆಯಿಂದ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವುದಾಗಿದೆ. ರಾಜ್ಯದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆಯನ್ನು 1988 ಮೇ 31 ರಿಂದ ಆಚರಿಸಲಾಗುತ್ತಿದೆ. ತಂಬಾಕಿನಲ್ಲಿ 7000 ವಿಷಾ ಅನಿಲಗಳು ಇರುತ್ತವೆ. ತಂಬಾಕು ತ್ಯಜಿಸಿದ 20 ನಿಮಿಷದಲ್ಲಿ ರಕ್ತದ ಒತ್ತಡ, ನಾಡಿ ಬಡಿತ ಮತ್ತು ದೇಹದ ಉಷ್ಣತೆ ಸಾಮಾನ್ಯ ಸ್ಥಿತಿಗೆ ಬರುತ್ತದೆ. ಗಂಟೆಯ ನಂತರ ದೇಹದಲ್ಲಿನ ಆಮ್ಲಜನಕ ಸಮಸ್ಥಿತಿಗೆ ಬಂದು ಉಸಿರಾಟ ಪ್ರಕ್ರಿಯೆ ಸರಳವಾಗುತ್ತದೆ. 24 ಗಂಟೆಯ ನಂತರ ಹೃದಯಾಘಾತವಾಗುವ ಸಂಭವ ಕಡಿಮೆಯಾಗುತ್ತದೆ. 48 ಗಂಟೆಯ ನಂತರ ದೇಹದ ನರಮಂಡಲ ಸರಿಯಾಗಿ ಕೆಲಸಮಾಡಲು ಶುರುವಾಗುತ್ತದೆ. ಬಾಯಿರುಚಿ ಮತ್ತು ವಾಸನೆ ಗ್ರಹಿಕೆ ಸರಿಯಾಗುತ್ತದೆ. 2 ವಾರದಿಂದ 3 ತಿಂಗಳವರೆಗೆ ರಕ್ತ ಪರಿಚಲನೆ ಸರಿಯಾಗಿ ದೇಹದ ಸಾಮರ್ಥ್ಯ ಹೆಚ್ಚುತ್ತದೆ. ಪುಪ್ಪುಸ ಕಾರ್ಯ ಶೇ.30 ರಷ್ಟು ಜಾಸ್ತಿಯಾಗುತ್ತದೆ ಎಂದು ಅವರು ತಿಳಿಸಿದರು.

ನಮ್ಮ ದೇಶದಲ್ಲಿ, ತ್ರಿಪುರಾ ರಾಜ್ಯ ಹೆಚ್ಚು ತಂಬಾಕು ಬಳಸುವ ರಾಜ್ಯವಾಗಿದೆ(ಶೇ.65) ಉಟobಚಿಟ ಂಜuಟಣ ಖಿobಚಿಛಿಛಿo Suಡಿveಥಿ ಅನುಸಾರ ಕರ್ನಾಟಕ ರಾಜ್ಯದಲ್ಲಿ ಶೇ.28.2 ವಯಸ್ಕರು (15 ವರ್ಷ ಮತ್ತು ಮೇಲ್ಪಟ್ಟವರು) ತಂಬಾಕು ವ್ಯಸನಿಗಳಿದ್ದಾರೆ. ಅದರಲ್ಲಿ ಶೇ.12 ರಷ್ಟು ಧೂಮಪಾನಿಗಳು ಮತ್ತು ಶೇ.19 ರಷ್ಟು ಹೊಗೆರಹಿತ ತಂಬಾಕು ಬಳಸುತ್ತಾರೆ ಎಂದು ತಿಳಿಸಿದ ಅವರು, ತಂಬಾಕಿನ ಬಗೆಗಿನ ಸತ್ಯಾಂಶಗಳು ಮತ್ತು ವಿಶ್ವದಾದ್ಯಂತ ತಂಬಾಕು ಸೇವನೆಯಿಂದ ಮತ್ತು ಧೂಮಪಾನದಿಂದ ಬರಬಹುದಾದಂತಹ ಖಾಯಿಲೆಗಳಾದ ಬಾಯಿ ಕ್ಯಾನ್ಸರ್, ಹೃದಯ ಸಂಬAಧಿತ ಕಾಯಿಲೆಗಳು ಮತ್ತು ಶ್ವಾಸಕೋಶದ ಕಾಯಿಲೆಗಳ ನಿಯಂತ್ರಣ ಮತ್ತು ತಡೆಗಟ್ಟುವ ಕ್ರಮಗಳ ಕುರಿತು ವಿವರವಾಗಿ ಮಾತನಾಡಿದರು.

ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ|| ನಂದಕುಮಾರ ಅವರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಯುವಕರು ಹೆಚ್ಚಾಗಿ ದುಶ್ಚಟಕ್ಕೆ ಒಳಗಾಗುತ್ತಿದ್ದಾರೆ ಎಂದ ಅವರು ಹದಿಹರೆಯದವರ ಆರೋಗ್ಯ ಸಮಸ್ಯೆಗಳು ಮತ್ತು ಪರಿಹಾರ ಕುರಿತು ತಿಳಿಸಿದರು. ತಂಬಾಕು ಸೇವನೆಯಿಂದ ದೂರವಿದ್ದು ಯುವಕರು ಜಾಗೃತರಾಗಿ ತಮ್ಮ ವಿದ್ಯೆ ಮತ್ತು ಜೀವನದ ಕಡೆಗೆ ಹೆಚ್ಚು ಗಮನ ಹರಿಸಬೇಕೆಂದು ತಿಳಿಸಿದರು.
ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ಸಂಚಾಲಕರಾದ ಬ್ರಹ್ಮಕುಮಾರಿ ಯೋಗಿನಿ ಅಕ್ಕ ಅವರು ಮಾತನಾಡಿ, ಯೋಗದ ಮತ್ತು ಧ್ಯಾನದ ಮೂಲಕ ಮನಸ್ಸನ್ನು ನಿಯಂತ್ರಣದಲ್ಲಿ ಇರಿಸಲು ಸಾಧ್ಯವಾಗುತ್ತದೆ. ಇದರಿಂದ ಸುಮಾರು 60 ಕ್ಕೂ ಹೆಚ್ಚು ಜನರು ಕುಡಿತದ ದುಶ್ಚಟದಿಂದ ಮುಕ್ತಿ ಹೊಂದಿರುತ್ತಾರೆ. ಯೋಗ ಮತ್ತು ಧ್ಯಾನದಿಂದ ಮನುಷ್ಯನ ಆರೋಗ್ಯ ಮತ್ತು ಮನಸ್ಸು ಎರಡೂ ನಿಯಂತ್ರಣದಲ್ಲಿ ಇರುವುದರ ಜೊತೆಗೆ ತಂಬಾಕು, ಮದ್ಯಪಾನ ಹೀಗೆ ಅನೇಕ ದುಶ್ಚಟಗಳಿಂದ ಮುಕ್ತಿ ಹೊಂದಬಹುದಾಗಿದೆ ಎಂದು ತಿಳಿಸುತ್ತ, ದುಷ್ಚಟಗಳಿಗೆ ಒಳಗಾದವರನ್ನು ತಮ್ಮ ಸಂಸ್ಥೆಯಿAದ ಏರ್ಪಡಿಸಿರುವ ಯೋಗ ಮತ್ತು ಧ್ಯಾನ ಶಿಬಿರದಲ್ಲಿ ಭಾಗವಹಿಸಿ ಅದರ ಲಾಭ ಪಡೆದುಕೊಳ್ಳುವಂತೆ ತಿಳಿಸಿದರು.

ನಂತರ ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ತಂಬಾಕು ವ್ಯಸನ ಮುಕ್ತ ಕೇಂದ್ರಕ್ಕೆ ಭೇಟಿ ನೀಡಲಾಯಿತು. ಅಲ್ಲಿ ಆಪ್ತ ಸಮಾಲೋಚನೆ ಮತ್ತು ನಿಕೋಟಿನ್ ಗಮ್‌ಗಳ ಸಹಾಯದಿಂದ ತಂಬಾಕು ಸೇವನೆ ತ್ಯಜಿಸಿದ ಮಹಮ್ಮದ ಅಲಿ ಎಂಬುವವರನ್ನು ಹಿರಿಯ ಸಿವ್ಹಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಲಕಾರಿ ರಾಮಪ್ಪ ಒಡೆಯರ್ ಅವರು ಕಿರು ಕಾಣಿಕೆ ಕೊಡುವುದರ ಮೂಲಕ ಸನ್ಮಾನಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಎ.ವಿ.ಕಣವಿ, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಪ್ರಕಾಶ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ರವಿಂದ್ರನಾಥ ಎಂ. ಹೆಚ್, ಜಿಲ್ಲಾ ಕುಷ್ಟರೋಗ ನಿರ್ಮೂಲನಾಧಿಕಾರಿ ಡಾ.ಪ್ರಕಾಶ ಹೆಚ್, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ವೆಂಕಟೇಶ ಕೆ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಶಶಿಧರ್ ಎ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರಾಮಾಂಜನೇಯ, ಪ್ರಭಾರಿ ಜಿಲ್ಲಾ ಸಲಹೆಗಾರರಾದ ಡಾ.ಜಯಶ್ರೀ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ.ಮಹೇಶ ಉಮಚಗಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವಿ. ಪೂಜಾರ, ಸೈಕಾಲಾಜಿಸ್ಟ್ ಶಾಂತಮ್ಮ ಕಟ್ಟಿಮನಿ, ಹಿ.ಆ.ನಿ.ಅ. ಎಲ್.ವ್ಹಿ ಸಜ್ಜನರ್ ಮತ್ತು ಆರೋಗ್ಯ ಇಲಾಖೆಯ ಎಲ್ಲಾ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!