
ದೈಹಿಕ ಶಿಕ್ಷಣ ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ
ಕರುನಾಡ ಬೆಳಗು ಸುದ್ದಿ
ವಿಜಯನಗರ, 29- ಅಲ್ಪಸಂಖ್ಯಾತರ ಸರಕಾರಿ ಮೌಲಾನಾ ಆಜಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆ ಹೊಸಪೇಟೆ ಶಾಲೆಯಲ್ಲಿ 6 ರಿಂದ 10ರವರೆಗೆ ತರಗತಿಗಳು ನಡೆಯಲಿವೆ.
ಈ ಶಾಲೆಯಲ್ಲಿ ದೈಹಿಕ ಶಿಕ್ಷಣ ಅತಿಥಿ ಶಿಕ್ಷಕರ ಹುದ್ದೆ ಖಾಲಿಯಾಗಿದ್ದು, ಆಸಕ್ತ ಬಿ.ಎ ಬಿ.ಪಿ.ಎಡ್ ಪದವೀಧರರು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಜೂನ್ 5 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ.9964732718ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಾಂಶುಪಾಲರಾದ ಮಂಜುನಾಥ ಪಾಟೀಲ್ ಅವರು ತಿಳಿಸಿದ್ದಾರೆ.