WhatsApp Image 2024-04-30 at 5.08.15 PM

ನರೇಗಾ ಕೂಲಿಕಾರರು ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಬೇಕು

ಕರುನಾಡ ಬೆಳಗು ಸುದ್ದಿ

ಯಲಬುರ್ಗಾ, 30- ಬೀರಲದಿನ್ನಿ ಗ್ರಾಮದ ನರೇಗಾ ಕೂಲಿಕಾರರು ಮೇ 7 ರಂದು ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ತಾಲೂಕು ಪಂಚಾಯತಿ ಸಹಾಯಕ ನಿರ್ದೇಶಕರಾದ ಹನಮಂತಗೌಡ ಪೊಲೀಸ್ ಪಾಟೀಲ್ ಹೇಳಿದರು.

ಯಲಬುರ್ಗಾ ತಾಲೂಕಿನ ಹಿರೇಅರಳಿಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೀರಲದಿನ್ನಿ ಗ್ರಾಮದ ನಾಲಾ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಜಿಲ್ಲಾ ಸ್ವೀಪ್ ಹಾಗೂ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

2024 ರ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನವು ಮೇ 7 ರಂದು ನಡೆಯಲಿದ್ದು, ನರೇಗಾ ಕೂಲಿಕಾರರು ಕಡ್ಡಾಯವಾಗಿ ಮತದಾನ ಮಾಡಬೇಕು. ಮತದಾನದಿಂದ ಯಾರೂ ವಂಚಿತರಾಗಬಾರದು ಎಂದು ಸಲಹೆ ನೀಡಿದರು.

ನರೇಗಾ ಯೋಜ‌ನೆಯಡಿ ಈಗ ವಲಸೆ ಯಾಕ್ರಿ ನಿಮ್ಮೂರಲ್ಲೇ ಉದ್ಯೋಗ ಖಾತ್ರಿ ಅಭಿಯಾನದಡಿ ಮೂರು ತಿಂಗಳ ಅಭಿಯಾ‌ನ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಇದರ ಸದುಪಯೋಗ ಪಡೆದು ತಮಗಿರುವ 100 ಮಾನವ ದಿನಗಳ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ಈ ವೇಳೆ ತಾಪಂ ತಾಂತ್ರಿಕ ಸಂಯೋಜಕರಾದ ಸಂತೋಷ ನಂದಾಪುರ, ಐಇಸಿ ಸಂಯೋಜಕರಾದ ಶರಣಪ್ಪ ಹಾಳಕೇರಿ, ಗ್ರಾ.ಪಂ ಡಿಇಒ ಶೇಕರ್, ಬಿಎಫ್ ಟಿ ಬಸಟೆಪ್ಪ, ಜಿಕೆಎಂ ಶಾಂತಮ್ಮ, ಕಾಯಕ ಬಂಧುಗಳು, ಕೂಲಿಕಾರರು ಮತ್ತು ಇತರರು ಭಾಗವಹಿಸಿದರು

Leave a Reply

Your email address will not be published. Required fields are marked *

error: Content is protected !!