
ನವಲಿ : ನರೇಗಾ ಕೂಲಿಕಾರರಿಗೆ ಮತದಾನ ಜಾಗೃತಿ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 19- ಕನಕಗಿರಿ ತಾಲೂಕಿನ ನವಲಿ ಗ್ರಾ.ಪಂ ವ್ಯಾಪ್ತಿಯ ಭೋಗಾಪುರೇಶ್ವರ ದೇಗುಲದ ಬಳಿ ಕೂಲಿಕಾರರಿಗೆ ಚೆಕ್ ಡ್ಯಾಂ ಹೂಳೆತ್ತುವ ಕೆಲಸ ನೀಡಲಾಗಿದ್ದು, ಕಾಮಗಾರಿ ಸ್ಥಳದಲ್ಲಿ ಶುಕ್ರವಾರದಂದು ತಾಲೂಕು ಸ್ವೀಪ್ ಸಮಿತಿ ವತಿಯಿಂದ ವಲಸೆ ಯಾಕ್ರೀ, ನಿಮ್ಮೂರಲ್ಲೇ ಉದ್ಯೋಗ ಖಾತರಿ ಅಭಿಯಾನ ಹಾಗೂ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಪಾಲ್ಗೊಂಡು, ಕಡ್ಡಾಯವಾಗಿ ಪ್ರತಿಯೊಬ್ಬರೂ ಮತದಾನ ಮಾಡಬೇಕು. ಯಾರೂ ಮತದಾನದಿಂದ ವಂಚಿತರಾಗಬಾರದು. ಜೊತೆಗೆ ನರೇಗಾ ಯೋಜನೆಯಡಿ ಎರಡು ತಿಂಗಳುಗಳ ಕಾಲ ವಲಸೆ ಯಾಕ್ರೀ, ನಿಮ್ಮೂರಲ್ಲೇ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನೀಡಲಾಗಿದ್ದು, ಯಾರೂ ಗುಳೆ ಹೋಗದೆ ನಿಮ್ಮೂರಲ್ಲೇ ಕೆಲಸ ಮಾಡಬೇಕು ಎಂದು ಹೇಳಿದರು.
ನಂತರ ಸಹಾಯಕ ನಿರ್ದೇಶಕರು ಕೂಲಿಕಾರರಿಗೆ ಕಡ್ಡಾಯವಾಗಿ ಮತದಾನದ ಮಾಡಲು ಮತದಾನದ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಇದಕ್ಕೂ ಮುನ್ನ, ಕಾಮಗಾರಿ ಸ್ಥಳವನ್ನು ಪರಿಶೀಲನೆ ಮಾಡಿದರು.
ಈ ಸಂದರ್ಭದಲ್ಲಿ ಗ್ರಾ.ಪಂ ಪಿಡಿಓ, ತಾಲೂಕು ಐಇಸಿ ಸಂಯೋಜಕರು, ಬಿಎಫ್.ಟಿ, ಗ್ರಾಮ ಕಾಯಕ ಮಿತ್ರರು ಸೇರಿದಂತೆ ಗ್ರಾ.ಪಂ ಸಿಬ್ಬಂದಿಗಳು, ಕೂಲಿಕಾರರು ಹಾಜರಿದ್ದರು.