
ನಿಮ್ಮ ಮತ ಅಮೂಲ್ಯ ತಪ್ಪದೆ ಮತ ಚಲಾಯಿಸಿ : ಡಾ.ಬಿ.ಈರಣ್ಣ
ಕರುನಾಡ ಬೆಳಗು ಸುದ್ದಿ
ಸಿರುಗುಪ್ಪ ಚುನಾವಣೆ ತಾಲೂಕು ಆಡಳಿತ ತಾಲೂಕು ಸ್ವೀಪ್ ಸಮಿತಿ ರಾಜ್ಯ ಸರ್ಕಾರಿ ನೌಕರರ ಸಂಘ ಆರೋಗ್ಯ ಇಲಾಖೆ ಸಹಭಾಗಿತ್ವದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ ಮತದಾನ ಜಾಗೃತಿ ಅಭಿಯಾನ ನಗರದ ಡಾ ಬಿ ಆರ್ ಅಂಬೇಡ್ಕರ್ ಸರ್ಕಲ್ ನಲ್ಲಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಪುಷ್ಪ ಅರ್ಪಿಸಿ ನಮನ ಸಲ್ಲಿಸಿ ಗೌರವಿಸಿ ಡಾ ಬಿ ಈರಣ್ಣ ಅವರು ಜಾಥಕ್ಕೆ ಚಾಲನೆ ನೀಡಿದರು.
ಪ್ರಜಾಪ್ರಭುತ್ವದಲ್ಲಿ ದೃಢ ವಿಶ್ವಾಸವುಳ್ಳ ಭಾರತದ ಪೌರರಾದ ನಾವು ನಮ್ಮ ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳು ಮತ್ತು ಮುಕ್ತ ನ್ಯಾಯ ಸಮ್ಮತ ಹಾಗೂ ಶಾಂತಿಯುತ ಚುನಾವಣೆಗಳ ಜನತೆಯನ್ನು ಎತ್ತಿ ಹಿಡಿಯುತ್ತೇವೆ ಎಂದು ಮತ್ತು ಪ್ರತಿಯೊಂದು ಚುನಾವಣೆಗಳಲ್ಲಿ ನಿರ್ಭಿತರಾಗಿ ಮತ್ತು ಯಾವುದೇ ಧರ್ಮ ಜನಾಂಗ ಜಾತಿ ಮತ ಭಾಷೆ ಅಥವಾ ಯಾವುದೇ ಪ್ರೇರೆಪಣೆಗಳ ದಾಕ್ಷಿಣ್ಯಗಳಿಂದ ಪ್ರಭಾವಿ ತರಾಗದೆ ಮತ ಚಲಾಯಿಸುತ್ತೇವೆ ಎಂದು ಪ್ರತಿಜ್ಞಾವಿಧಿಯನ್ನು ಬೋಧಿಸಿ ನಿಮ್ಮ ಮತ ಅಮೂಲ್ಯ ತಪ್ಪದೇ ಚಲಾಯಿಸಬೇಕು ಎಂದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಹೆಚ್ ಲಿಂಗರಾಜ ರೆಡ್ಡಿ, ಏಷ್ಯನ್ ಗೇಮ್ಸ್ ಕಂಚಿನ ಪದಕ ವಿಜೇತ ಐಕಾನ್ ರಾಯಭಾರಿ ಕುಮಾರಿ ನಂದಿನಿ, ರಾಷ್ಟ್ರೀಯ ಸಾಕ್ಷರತಾ ಅಬ್ದುಲ್ ನಬಿ, ಸರ್ಕಾರಿ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ ಗುರುನಾಥ್, ಆರೋಗ್ಯ ಇಲಾಖೆಯ ಎಲ್ಲಾ ಸಿಬ್ಬಂದಿ ವರ್ಗದವರು, ಎಲ್ಲ ಸದಸ್ಯರು, ಆಶಾ ಕಾರ್ಯಕರ್ತೆಯರು, ಸಾರ್ವಜನಿಕರು ಜಾಥದಲ್ಲಿ ಭಾಗವಹಿಸಿದ್ದರು.