WhatsApp Image 2024-04-21 at 5.28.10 PM

ನೇಹಾ ಹಿರೇಮಠ ಕೊಲೆ ಪ್ರಕರಣ ಆರೋಪಿಗೆ ಗಲ್ಲು ಶಿಕ್ಷೆಗೆ ಆಗ್ರಹಿಸಿ, ಏ.೨೩ರಂದು ಪ್ರತಿಭಟನೆ

ಕರುನಾಡ ಬೆಳಗು ಸುದ್ದಿ

ಕುಕನೂರು, 21- ನೇಹಾ ಹಿರೇಮಠ ಅವರನ್ನು ಕೊಲೆ ಮಾಡಿದ ಆರೋಪಿ ಫಯಾಜ್‌ನಿಗೆ ಗಲ್ಲು ಶಿಕ್ಷೆಯಾಗಬೇಕೆಂದು ಆಗ್ರಹಿಸಿ ಪಟ್ಟಣದಲ್ಲಿ ಏ.೨೩ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜಂಗಮ ಸಮಾಜದ ತಾಲೂಕಾಧ್ಯಕ್ಷ ಸಿದ್ಧಯ್ಯ ಕಳ್ಳಿಮಠ ಹೇಳಿದರು.

ಪಟ್ಟಣದ ಪತ್ರಿಕಾ ಭವನದಲ್ಲಿ ಶನಿವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿರುವ ಪ್ರತಿಷ್ಠಿತಿ ಶಾಲಾ-ಕಾಲೇಜಗಳಲ್ಲಿ ಭದ್ರತೆ ಇಲ್ಲವಾಗಿದೆ. ಆರೋಪಿ ಕಾಲೇಜ ಆವರಣದಲ್ಲಿ ಬಂದು ಚಾಕುವಿನಿಂದ ಇರಿದು ಕೊಲೆ ಮಾಡಿದ್ದು ಮಾನವ ಕುಲ ತಲೆ ತಗ್ಗಿಸುವಂತೆ ಮಾಡಿದೆ. ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು ಇದರಿಂದ ಉಳಿದ ಹೆಣ್ಣು ಮಕ್ಕಳಿಗೆ ತೊಂದರೆಯಾಗುವದು ತಪ್ಪುತ್ತದೆ.

ಈ ಘಟನೆ ಆಗ್ರಹಿಸಿ ನಾನಾ ಸಂಘಟನೆಗಳೊAದಿಗೆ ಅಖಿಲ ಕರ್ನಾಟಕ ಬೇಡ ಜಂಗಮ ಒಕ್ಕೂಟವತಿಯಿಂದ ಬೃಹತ್ ಪ್ರತಿಭಟನೆಯನ್ನು ವೀರಭದ್ರೇಶ್ವರ ವೃತ್ತದಿಂದ ತೇರಿನಗಡ್ಡಿ, ಕೊಳಿಪೇಟೆ ಮಾರ್ಗವಾಗಿ, ಅಂಬೇಡ್ಕರ್ ವೃತ್ತದ ಮೂಲಕ ವೀರಭದ್ರಪ್ಪ ವೃತ್ತದಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಾಗುವದು ಎಂದು ಹೇಳಿದರು.

ಜಿ.ಪಂ ಮಾಜಿ ಅಧ್ಯಕ್ಷ ರಾಮಣ್ಣ ಭಜಂತ್ರಿ, ಬಸವರಾಜ ಮಂಡಲಗೇರಿ, ಈಶಯ್ಯ ಶಿರೂರಮಠ, ಮಲ್ಲಪ್ಪ ಗುತ್ತಿ, ಕುಮಾರಸ್ವಾಮಿ ಹಿರೇಮಠ, ವೀರಯ್ಯ, ಧರ್ಮಣ್ಣ ಕಂಬಳಿ ಸೇರಿದಂತೆ ಇತರರು ಇದ್ದರು.

Leave a Reply

Your email address will not be published. Required fields are marked *

error: Content is protected !!