IMG-20240420-WA0026

ನೇಹಾ ಹಿರೇಮಠ ಹತ್ಯೆಗೆ ಖಂಡಿಸಿ ಪ್ರತಿಭಟನೆ, ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 20- ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ರವರ ಪುತ್ರಿ, ಖಾಸಗಿ ಕಾಲೇಜಿನ ಎಂಸಿಎ ವಿದ್ಯಾರ್ಥಿನಿ ಕುಮಾರಿ ನೇಹಾ ಹಿರೇಮಠಳ ಪ್ರೀತಿ ನಿರಾಕರಿಸಿದ ಕಾರಣಕ್ಕಾಗಿ ಅನ್ಯ ಕೋಮಿನ ದುಷ್ಕರ್ಮಿಯೊಬ್ಬ ಕುಮಾರಿ ನೇಹಾ ಹಿರೇಮಠ ಪರೀಕ್ಷೆ ಮುಗಿಸಿ ಮನೆಗೆ ತೆರಳುವಾಗ ಎಪ್ರಿಲ್ 18 ರಂದು ಗುರುವಾರ ಸಂಜೆ ಕಾಲೇಜಿನ ಕ್ಯಾಂಪಸ್‌ನಲ್ಲಿಯೇ ಆಕೆಗೆ ಚಾಕುವಿನಿಂದ ಇರಿದು ಹತ್ಯೆಗೈದಿರುವುದು ಖಂಡನೀಯವಾಗಿದೆ ಎಂದು ಶ್ರೀವೀರಮಹೇಶ್ವರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಶನಿವಾರ ಕೊಪ್ಪಳ ನಗರದ ಅಶೋಕ ‌ವೃತ್ತದಲ್ಲಿ ಪ್ರತಿಭಟಿಸಿ ಎಸ್ ಪಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ವಿದ್ಯಾನಗರದ ಕೆಎಲ್‌ಇ ಕಾಲೇಜಿನಲ್ಲಿ ಎಂಸಿಎ ಓದುತ್ತಿದ್ದ ನೇಹಾ ಹಿರೇಮಠ, ಅದೇ ಕಾಲೇಜಿನ ಫಯಾಜ್ ಎಂಬಾತ ಪ್ರೀತಿಸುವಂತೆ ಪೀಡಿಸುತ್ತಿದ್ದನು. ಆಗಾಗ ಕಿರುಕುಳವನ್ನೂ ಸಹ ನೀಡುತ್ತಿದ್ದನು. ಗುರುವಾರ ಸಂಜೆ ಏಕಾಏಕಿ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದು ಪರಾರಿಯಾಗಿದ್ದಾನೆಂದು ಪೊಲೀಸರ ಮಾಹಿತಿಯಿಂದ ತಿಳಿದು ಬಂದಿದೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ವಿದ್ಯಾರ್ಥಿನಿಯನ್ನು ಸ್ಥಳೀಯರು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ನೇಹಾ ಹಿರೇಮಠ ಮೃತಪಟ್ಟಿರುತ್ತಾಳೆ. ಕುಮಾರಿ ನೇಹಾಳನ್ನು ಹತ್ಯೆಗೈದ ದುಷ್ಕರ್ಮಿಯನ್ನು ಬಂಧಿಸಿ ಗಲ್ಲುಶಿಕ್ಷೆ ವಿಧಿಸಬೇಕು. ವಿದ್ಯಾರ್ಥಿನಿ ಕುಟುಂಬಕ್ಕೆ ಸರ್ಕಾರ ಸೂಕ್ತ ಪರಿಹಾರ ಪೋಷಿಸಬೇಕು.

ಕುಟುಂಬಸ್ಥರಿಗೆ ರಕ್ಷಣೆ ನೀಡಬೇಕು ಮತ್ತು ಇಂತಹ ಘಟನೆಗಳು ಮರುಕಳಿಸದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಲಾಗುವುದು ಎಂದು ಶ್ರೀವೀರಮಹೇಶ್ವರ ಕ್ಷೇಮಾಭಿವೃದ್ಧಿ ಸಂಘ ಆಗ್ರಹಿಸಿದೆ. ಪತ್ರಿಭಟನೆಯಲ್ಲಿ ಶ್ರೀವೀರಮಹೇಶ್ವರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಸೇರಿದಂತೆ ಅನೇಕ ಜಂಗಮದ ಸಮಾಜ ಮುಖಂಡರು ಇದ್ದರು.

Leave a Reply

Your email address will not be published. Required fields are marked *

error: Content is protected !!