
ನೇಹಾ ಹಿರೇಮಠ ಹತ್ಯೆ ಖಂಡಿಸಿ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ
ಕರುನಾಡ ಬೆಳಗು ಸುದ್ದಿ
ಸಿರುಗುಪ್ಪ, 22- ಹುಬ್ಬಳ್ಳಿ ಕಾಲೇಜಿನ ವಿದ್ಯಾರ್ಥಿ ನೇಹಾ ಹಿರೇಮಠ ಅವರ ಬರ್ಬರ ಹತ್ಯೆ ಖಂಡಿಸಿ ಸಿರುಗುಪ್ಪ ತಾಲೂಕಿನ ಹಿಂದೂ ಸಂಘಟನೆಗಳ ಮುಖಂಡರೊಂದಿಗೆ ತಾಲೂಕ ಕ್ರೀಡಾ ಮೈದಾನದಿಂದ ತಹಸಿಲ್ದಾರ್ ಕಚೇರಿವರೆಗೆ ಪ್ರತಿಭಟನೆ ನಡೆಸಿದರು.
ಹಿಂದೂ ಸಂಘಟನೆಗಳ ಕಾರ್ಯಕರ್ತರು ಫಯಾಜ್ ಗೆ ಕಠಿಣ ಶಿಕ್ಷೆ ಒದಗಿಸಬೇಕು ಎಂದು ತಹಸಿಲ್ದಾರ್ ಶಂಸೇ ಆಲಂ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕು ವಿದ್ಯಾರ್ಥಿನಿ ಕುಟುಂಬಕ್ಕೆ ನ್ಯಾಯ ಒದಗಿಸಿ ಕೊಡಬೇಕು ಎಂದು ಒತ್ತಾಯಿಸಿದರು. ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಬೇಕು ಎಂದು ಮಾಜಿ ಶಾಸಕ ಎಂ ಎಸ್ ಸೋಮಲಿಂಗಪ್ಪ ಒತ್ತಾಯ ಮಾಡಿದರು.
ದರಪ್ಪನಾಯಕ ಕುಂಟನಾಳ್ ಮಲ್ಲಿಕಾರ್ಜುನ ಸ್ವಾಮಿ ವಿವಿಧ ಹಿಂದೂ ಸಂಘಟನೆಗಳ ಮುಖಂಡರು ಪಾಲ್ಗೊಂಡಿದ್ದರು.