ನ.18 ರಂದು ವಿದ್ಯುತ್ ಗ್ರಾಹಕರ ಅಹವಾಲು ಸ್ವೀಕಾರ ಸಭೆ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, ೧೭- ಜೆಸ್ಕಾಂ ಮುನಿರಾಬಾದ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ವಿದ್ಯುತ್‌ಚ್ಛಕ್ತಿಗೆ ಸಂಬಂಧಿಸಿದ ಕುಂದು ಕೊರತೆಗಳನ್ನು ಪರಿಹರಿಸುವ ಉದ್ದೇಶದಿಂದ ನವೆಂಬರ್ 18 ರಂದು ಬೆಳಿಗ್ಗೆ 11 ಗಂಟೆಗೆ ಮುನಿರಾಬಾದ ಕಾರ್ಯ ಮತ್ತು ಪಾಲನಾ ಉಪ ವಿಭಾಗದ ಕಚೇರಿ ಆವರಣದಲ್ಲಿ ಗ್ರಾಹಕರ ಅಹವಾಲು ಸ್ವೀಕಾರ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.
ವಿದ್ಯುತ್ ಗ್ರಾಹಕರು ಅಹವಾಲು ಸ್ವೀಕಾರ ಸಭೆಗೆ ಹಾಜರಾಗಿ, ಸದುಪಯೋಗ ಪಡೆದುಕೊಳ್ಳಬೇಕು ಎಂದು ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.