WhatsApp Image 2024-06-29 at 6.12.58 PM

ಪೆಟ್ರೋಲ್, ಡಿಸೇಲ್ ಬೆಲೆ ಹೆಚ್ಚಳ ಖಂಡಿಸಿ ಪ್ರತಿಭಟನೆ‌

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 29- ರಾಜ್ಯ ಸರ್ಕಾರ ‌ ಪೆಟ್ರೋಲ್, ಡಿಸೇಲ್ ಬೆಲೆ ಹೆಚ್ಚಳ ಖಂಡಿಸಿ ಕೊಪ್ಪಳದಲ್ಲಿ ಬಿಜೆಪಿ ಪಕ್ಷದಿಂದ ಜಿಲ್ಲಾಧಿಕಾರಿ ಕಚೇರಿ‌ ಮುಂದೆ ಪ್ರತಿಭಟನೆ ಮಾಡಲಾಯಿತು.

ಶನಿವಾರದಂದು ಕೊಪ್ಪಳ ನಗರದ ಅಶೋಕ್ ವೃತ್ತದಿಂದ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರುಗಡೆ ಪ್ರತಿಭಟನೆ ಮಾಡುವ ಮೂಲಕ ರಾಜ್ಯ ಸರ್ಕಾರದ ಜನ ವಿರೋಧಿ ನೀತಿ ಖಂಡಿಸಿದರು.

ವಾಲ್ಮೀಕಿ ನಿಗಮ್ ದ ಹಗರಣ ನಡೆಸಿ ಆ ಹಣವನ್ನು ಹೊರ ರಾಜ್ಯಗಳಿಗೆ ಅಕ್ರಮವಾಗಿ ಕಳುಹಿಸಿ ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಬಳಸಿಕೊಂಡಿದೆ. ಅಧಿಕಾರಿಗಳ ಮೇಲೆ ಈ ಪ್ರಕರಣದ ಆರೋಪ ಹೊರಿಸಿ ಈ ಸರ್ಕಾರ ಬಚಾವಾಗಲು ಯತ್ನಿಸುತ್ತಿದೆ.

ನಮ್ಮನ್ನು ಹಾಗೂ ಕಾರ್ಯಕರ್ತರನ್ನೂ ಬಂಧಿಸುವ ಮೂಲಕ ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಯತ್ನವನ್ನೂ ಪೊಲೀಸ್ ಇಲಾಖೆ ಮಾಡುತ್ತಿದೆ, ಪೊಲೀಸ್ ಇಲಾಖೆಯು ದಯವಿಟ್ಟು ರಾಜ್ಯ ಸರ್ಕಾರದ ಮಾತನ್ನು ಕೇಳದೆ ಅನ್ಯಾಯದ ವಿರುದ್ಧ ಪ್ರತಿಭಟನೆ ಮಾಡಲು ಅವಕಾಶ ನೀಡಬೇಕಿದೆ ಎಂದು ಆಗ್ರಹಿಸಿದರು ‌.

ಪ್ರತಿಭಟನೆ ನೇತ್ರತ್ವವನ್ನು ಜಿಲ್ಲಾ ಅಧ್ಯಕ್ಷ ನವೀನ ಗುಳಗಣ್ಣ ನವರ, ವಿಧಾನ ಪರಿಷತ್ ಸದಸ್ಯರಾದ ಶ್ರೀಮತಿ ಹೇಮಲತಾ ನಾಯಕ್, ಮಾಜಿ ಶಾಸಕರಾದ ಪರಣ್ಣ ಮುನವಳ್ಳಿ ಹಾಗೂ ಬಸವರಾಜ ಧಡೆಸೂಗೂರು, ಡಾ ಬಸವರಾಜ ಕ್ಯಾವಟರ, ಪ್ರಮುಖ ಮುಖಂಡರು, ಜಿಲ್ಲಾ ಹಾಗೂ ತಾಲ್ಲೂಕು ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗ ವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!