31Ylb03

ಪ್ರತಿಯೊಬ್ಬರೂ ಮಕ್ಕಳನ್ನು ಶಾಲೆಗೆ ಕಳುಹಿಸಿ : ಶರಣಪ್ಪ ಈಳಗೇರ್ 

ಕರುನಾಡ ಬೆಳಗು ಸುದ್ದಿ

ಯಲಬುರ್ಗಾ, 1- ತಾಲೂಕಿನ ತುಮ್ಮರಗುದ್ದಿ ಗ್ರಾಮದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಹಾಗೂ ಎಲ್‌ಕೆಜಿ, ಯುಕೆಜಿ, ೧ನೇ ತರಗತಿ ಆಂಗ್ಲ ಮಾಧ್ಯಮ ಪ್ರಾರಂಭೋತ್ಸವ ಕಾರ್ಯಕ್ರವನ್ನು ಶುಕ್ರವಾರ ಹಮ್ಮಿಕೊಳ್ಳಲಾಗಿತ್ತು.

ತಾ.ಪಂ. ಮಾಜಿ ಸದಸ್ಯ ಶರಣಪ್ಪ ಈಳಗೇರ್ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಜನರು ಸರಕಾರದಿಂದ ಅನುಷ್ಠಾನಗೊಂಡ ಯೋಜನೆಗಳನ್ನು ಸಕಾಲಕ್ಕೆ ಪಡೆದುಕೊಳ್ಳಲು ಮುಂದಾಗಬೇಕು. ಹಳ್ಳಿಯ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ಕೊಡಿಸಲು ಸರಕಾರಿ ಜಾರಿಗೊಳಿಸಿದ ಶಿಕ್ಷಣವನ್ನು ಪ್ರತಿಯೊಬ್ಬರೂ ಕಡ್ಡಾಯವಾಗಿ ಪಡೆಯಬೇಕಿದೆ. ಶಾಲೆಯಲ್ಲಿ ದೊರೆಯುವ ಸೌಲಭ್ಯಗಳನ್ನು ಸದ್ಬಳಿಕೆ ಮಾಡಿಕೊಳ್ಳಲು ಮುಂದಾಗಬೇಕಿದೆ ಎಂದು ತಿಳಿಸಿದರು.

ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಚಂದಾಲಿAಗಪ್ಪ ಹಿರೇಮನಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಗುರುಗಳ ಹುಚ್ಚೀರಪ್ಪ ಬೆಟಗೇರಿ, ಮುಖಂಡರಾದ ದುರುಗಪ್ಪ ನಡುವಿನಮನಿ, ತಿರುಗುಣೆಪ್ಪ ಸಾಸ್ವಿಹಾಳ, ದೇವಪ್ಪ ಪರಂಗಿ, ಶಂಕ್ರಪ್ಪ ಬಡಿಗೇರ್, ಪ್ರಭುರಾಜ ನವಲಗುಂದ, ಕಲ್ಲೇಶ ಹಿರೇಮಠ, ನಗ್ಮಾಬೇಗಂ ಹಾಗೂ ಶಿಕ್ಷಣ ಪ್ರೇಮಿಗಳು, ಗ್ರಾಮಸ್ಥರು, ಶಿಕ್ಷಕರು ಮಕ್ಕಳು ಇದ್ದರು.

Leave a Reply

Your email address will not be published. Required fields are marked *

error: Content is protected !!