
ಬರ ಪರಿಹಾರ ವಿತರಿಸಲು ಆಗ್ರಹ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 26 – ಜಿಲ್ಲೆಯನ್ನು ಬರ ಪೀಡಿತವೆಂದು ಸರ್ಕಾರ ಘೋಷಿಸಿದೆ. ಶೀಘ್ರ ಪರಿಹಾರ ವಿತರಿಸಬೇಕೆಂದು ಭಾರತೀಯ ಕಿಸಾನ್ ಸಂಘದ ಜಿಲ್ಲಾಧ್ಯಕ್ಷ ಹನುಮಂತಪ್ಪ ಗೊಂದಿ ಆಗ್ರಹಿಸಿದರು.
ಬರದಿಂದ ರೈತರು ಕಂಗಾಲಾಗಿದ್ದಾರೆ. ಈ ನಡುವೆ ವಿದ್ಯುತ್ ಲೋಡ್ ಶೆಡ್ಡಿಂಗ್ ಮಾಡುತ್ತಿದ್ದು, ನೀರಾವರಿ ಹೊಂದಿದ ರೈತರಿಗೂ ಸಮಸ್ಯೆ ಆಗುತ್ತಿದೆ. ಐದು ತಾಸು ವಿದ್ಯುತ್ ನೀಡಿದರೂ ವೋಲ್ಟೇಜ್ ಇರುತ್ತಿಲ್ಲ. ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗಿದೆ. ಬೆಳೆ ಒಣಗುತ್ತಿದ್ದು, ದಿಕ್ಕು ತೋಚದಾಗಿದೆ ಎಂದು ಪರಿಸ್ಥಿತಿ ವಿವರಿಸಿದರು.
ತಕ್ಷಣ ಬರ ಪರಿಹಾರ ಕಾಮಗಾರಿ ಕೈಗೊಳ್ಳಬೇಕು. ಎಕರೆಗೆ 20 ಸಾವಿರ ರೂ. ಪರಿಹಾರ ನೀಡಬೇಕು. ಜಾನುವಾರುಗಳಿಗೆ ಕುಡಿವ ನೀರು, ಮೇವಿನ ವ್ಯವಸ್ಥೆ ಕಲ್ಪಿಸಬೇಕು. ರೈತರ ಪಂಪ್‌ಸೆಟ್‌ಗಳಿಗೆ ನೀಡುತ್ತಿದ್ದ ಸಬ್ಸಿಡಿ ಮುಂದುವರಿಸಬೇಕು. ಈ ಸಂಬAಧ ರಾಜ್ಯಾದ್ಯಂತ ಸಂಘಟನೆಯಿAದ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುತ್ತಿದೆ. ತಕ್ಷಣ ಪರಿಹಾರ ನೀಡದಿದ್ದಲ್ಲಿ ಹೋರಾಟ ಹಮ್ಮಿಕೊಳ್ಳುತ್ತೇವೆ ಎಂದು ತಿಳಿಸಿದರು.
ಪದಾಧಿಕಾರಿಗಳಾದ ಮಲ್ಲಿಕಾರ್ಜುನಗೌಡ ಪೊಲಿಸ್ ಪಾಟೀಲ್, ಈಶ್ವರಪ್ಪ ದಿನ್ನಿ, ಹನುಮರಡ್ಡಿ ಇತರರಿದ್ದರು.
======